ಕಂಬಳ ವೀರ ಶ್ರೀನಿವಾಸ್‌ ಗೌಡ ರವರಿಗೆ ಮುಖ್ಯಮಂತ್ರಿ ಯಡಿಯೂರಪ್ಪರಿಂದ ಸನ್ಮಾನ

Tuesday, February 18th, 2020
Kambala-jockey

ಬೆಂಗಳೂರು : ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ಜನಮನ್ನಣೆಗೆ ಪಾತ್ರವಾಗಿರುವ ಶ್ರೀನಿವಾಸ್‌ ಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಸಂದರ್ಭ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಮಿಕ ಇಲಾಖೆಯ ವತಿಯಿಂದ ಶ್ರೀನಿವಾಸ ಗೌಡ ಅವರಿಗೆ ರೂ. 3 ಲಕ್ಷ ಮೊತ್ತದ ಚೆಕ್ […]

ಇಂದು ಸಂಜೆ 4 ಗಂಟೆಗೆ ಗೋಲ್ಡ್‌ಫಿಂಚ್‌ ಸಿಟಿ ಮೈದಾನದಲ್ಲಿ ‘ಪ್ರಕಾಶಭಿನಂದನ’ 60 ರ ಸಂಭ್ರಮ

Wednesday, December 25th, 2019
Prakashabhinandane

ಮಂಗಳೂರು : ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಫಿಂಚ್‌ ಸಿಟಿ ಮೈದಾನದಲ್ಲಿ “ಪ್ರಕಾಶಭಿನಂದನ-60ರ ಸಂಭ್ರಮ”ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸ […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ

Tuesday, April 5th, 2011
ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು  : ದೇಶಾಭಿಮಾನದಿಂದ ಭಾರತ ವಿಶ್ವಕಪ್ ಗೆದ್ದಾಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಉತ್ಸಾಹ ಮಿತಿಮೀರಿತ್ತು, ಅದೇ ಉತ್ಸಾಹದಲ್ಲಿ ಕ್ರಿಕೆಟ್ ಆಟಗಾರರರಿಗೆ 50×80 ಬಿಡಿಎ ನಿವೇಶನ ನೀಡುವುದಾಗಿ ಘೋಷಿಸಿಯೂಬಿಟ್ಟರು. ಇಂಥ ವಾಗ್ದಾನವನ್ನು ನೀಡಲು  ಮುಖ್ಯಮಂತ್ರಿಗಳಿಗೆ ಅಧಿಕಾರವೇ ಇಲ್ಲ. ಸರಕಾರ ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ. ಏಕೆಂದರೆ, ಬಿಡಿಎ ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರಿಗೆ ನೀಡಲಾಗಿದ್ದ ಬಿಡಿಎ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಲ್ಲಿ […]