ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Monday, December 2nd, 2024
Rishika-Kundeshwar

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಸಿಎಂ ಹಾರೈಸಿದರು. ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು. ಪ್ರೆಸ್ ಕ್ಲಬ್ ಗೌರವಬೆಂಗಳೂರು […]

ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Tuesday, October 1st, 2024
siddaramaiha

ಬೆಂಗಳೂರು : ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು ರಚಿಸಿ ಮಾರಿಕೊಂಡಿದ್ದರು. ಅದಕ್ಕೆ […]

ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಕೇರಳದ ಅರ್ಜುನ್ ದೇಹ ಪತ್ತೆ ಹಚ್ಚುವಲ್ಲಿ ರಾಜ್ಯಸರ್ಕಾರ ಯಶಸ್ವಿ: ಸಿಎಂ ಸಿದ್ದರಾಮಯ್ಯ

Wednesday, September 25th, 2024
siddaramaiha

ಕಾಲಿಕಟ್ : ಶಿರೂರಿನ ಭೂ ಕುಸಿತದಲ್ಲಿ ಮೃತಪಟ್ಟಿದ್ದ ಕೇರಳದ ಅರ್ಜುನ್ ಅವರ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕೇರಳದ ಕಾಲಿಕಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಮತ್ತು ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು. ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ

Friday, August 2nd, 2024
cm-kodagu

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ […]

ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ

Wednesday, July 3rd, 2024
Tullu-FIlm

ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ. ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ […]

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

Saturday, June 29th, 2024
narendra-Modi-cm

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳುಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ […]

ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Saturday, June 22nd, 2024
Kamala-Hampana

ಬೆಂಗಳೂರು : ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ […]

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Friday, June 14th, 2024
CM-mysuru

ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು ಪ್ರತಿಕ್ರಿಯೆ ಎಂದರು. […]

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ

Tuesday, June 11th, 2024
Exercise

ಬೆಂಗಳೂರು : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ […]

ಮುಂದಿನ ಬಜೆಟ್ ನಲ್ಲಿ ಬಂಟ ರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ – ಮುಖ್ಯಮಂತ್ರಿ ಭರವಸೆ

Saturday, October 28th, 2023
Vishwa-Buntara-sammelana-Ud

ಉಡುಪಿ : ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. […]