ಸ್ಕೂಟರ್‌ಗೆ ಲಾರಿ ಡಿಕ್ಕಿ, ಪೆಟ್ರೋಲ್ ಪಂಪ್ ಮ್ಯಾನೇಜರ್ ಮೃತ್ಯು

Saturday, June 8th, 2024
Rama-Naik

ಬಂಟ್ವಾಳ : ಲಾರಿಯೊಂದು ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ, ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ. ರಾಮನಾಯ್ಕ ಅವರು ಸ್ಕೂಟರ್‌ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದರು. ಈ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ರಾಮನಾಯ್ಕ ಅವರು ತೆರಳುತ್ತಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ […]

ಪಕ್ಕದ ಮನೆಯ ಹುಡುಗಿಯ ಜೊತೆ ಪರಾರಿಯಾದ ಹುಡುಗ, ಪ್ರೇಮ ಶಂಕೆ

Monday, November 27th, 2023
Rasma Sinan

ಬಂಟ್ವಾಳ : ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು […]

ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ, ಇಬ್ಬರು ಆರೋಪಿಗಳ ಸೆರೆ

Thursday, November 23rd, 2023
ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ, ಇಬ್ಬರು ಆರೋಪಿಗಳ ಸೆರೆ

ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಸಮೇತ ಮೌಲ್ಯ ಒಟ್ಟು 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಮಾರ್ನ ಬೈಲು ಹಾಗೂ ಉಳ್ಳಾಲ ತಾಲೂಕು ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ದಿಮ್ಮಿಗಳನ್ನು […]