ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ವರ್ಗಾವಣೆ

Tuesday, October 20th, 2020
Mohammed Nazir

ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಝೀರ್ ಅವರನ್ನು ಒಂದು ವರ್ಷದಿಂದ ಸ್ಮಾರ್ಟ್ ಸಿಟಿ ಲಿ.ಇದರ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿತ್ತು. ಮುಹಮ್ಮದ್ ನಝೀರ್ ಅವರಿಗೆ ಹೊಸ ಹುದ್ದೆ ಇನ್ನೂ ನಿಗದಿಯಾಗಿಲ್ಲ. ಅವರ ಸ್ಥಾನಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.

ಮಂಗಳೂರು : ಮಹಾನಗರ ಪಾಲಿಕೆಯ ಹೊಸ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕ

Tuesday, September 17th, 2019
Ajith

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕಗೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಅಜಿತ್‌ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.  

ದೇಶವನ್ನೇ ಬಿಚ್ಚಿಬೀಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ 8 ವರ್ಷ, ಮಡಿದವರಿಗೆ ಶ್ರದ್ಧಾಂಜಲಿ

Tuesday, May 22nd, 2018
aeroplane

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ್ದ ವಿಮಾನ ದುರಂತದ ಕಹಿ ಘಟನೆಗೆ ಇಂದಿಗೆ 8 ವರ್ಷ. ಅಂತೆಯೇ ದುರಂತದಲ್ಲಿ ಮಡಿದವರಿಗೆ ಇಂದು ಮಂಗಳೂರಿನ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದ.ಕ. ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದ.ಕ. ಜಿಪಂ ಸಿಇಒ ಡಾ. ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, […]

ದ.ಕ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದೆ ಪರಿಹಾರ ಕ್ರಮ: ಆಯುಕ್ತರು

Thursday, February 1st, 2018
mayor-kavitha

ಮಂಗಳೂರು: ಕೂಳೂರು, ಬೆಂಗರೆ, ಜೋಕಟ್ಟೆಯ ತೋಕೂರು ಪ್ರದೇಶಗಳಲ್ಲಿ ಫಲ್ಗುಣಿ ನದಿ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಇಂದು ನಡೆದ ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಪ್ರಸ್ತಾಪಗೊಂಡಿತು. ಮೇಯರ್ ಕವಿತಾ ಸನಿಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯ ದಯಾನಂದ ಶೆಟ್ಟಿ ಈ ಬಗ್ಗೆ ಪ್ರಸ್ತಾಪಿಸಿ, ಫಲ್ಗುಣಿ ನದಿಯಲ್ಲಿ ಕಲುಷಿತ ನೀರು ಹರಿಯುತ್ತಿರುವುದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಕಳೆದ ಬಾರಿ ಮರವೂರಿನಲ್ಲಿ ಸಮಸ್ಯೆ ಎದುರಾದಾಗ ಸಮಿತಿ ರಚಿಸಲಾಗಿದ್ದು, ಅದರ ವರದಿ ಏನಾಗಿದೆ ಎಂದು ಪ್ರಶ್ನಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮನಪಾ […]