ಕೊಲ್ಲೂರಿನಲ್ಲಿ ಬೃಹತ್ ಶಿಲಾಯುಗದ ನಿವೇಶನ ಪತ್ತೆ
Sunday, July 19th, 2020ಉಡುಪಿ : ಭಾರತದ ಪ್ರಖ್ಯಾತ ಶಾಕ್ತ ಆರಾಧನಾ ಕೇಂದ್ರವಾದ ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್ ಶಿಲಾಯುಗ ಕಾಲದ ನಿಲ್ಸ್‌ಕಲ್ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ ಅವಶೇಷಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷನೆಯಲ್ಲಿ ಪತ್ತೆಯಾಗಿವೆ, ಎಂದು ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ಕೊಲ್ಲೂರಿನ ಬೃಹತ್ ಶಿಲಾಯುಗ ನಿವೇಶನದ ಶೋಧ, ಕೊಲ್ಲೂರು ಮತ್ತು ಕೊಲ್ಲೂರಿನ ಮೂಕಾಂಬಿಕೆಯ ಪ್ರಾಚೀನತೆಯನ್ನು ಸುಮಾರು ಕ್ರಿ.ಪೂ. 1000 […]