ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಆಸ್ಪತ್ರೆ: ಆರ್ ಅಶೋಕ್

Tuesday, August 10th, 2021
RAshoka

ಬೆಂಗಳೂರು  : ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಪ್ರಾರಂಭಿಲಾಗುವುದು ಎಂದು ಕಂದಾಯ ಸಚಿವ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರವು ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆಯಡಿ, ಕಂದಾಯ ಇಲಾಖೆಯು ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಎಲ್ಲಾ […]

ಕೋವಿಡ್-19 ಸೋಂಕಿನ ಸಂಭಾವ್ಯ ಮೂರನೇ ಅಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Saturday, July 24th, 2021
KV Rajendra

ಮಂಗಳೂರು : ಕೋವಿಡ್-19 ಸೋಂಕಿನ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲೀ ಅದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಜು.23ರ ಶುಕ್ರವಾರ ನಗರದ ವೆನ್‍ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ […]

ಕೋವಿಡ್ ನಿಂದ ಮಕ್ಕಳ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ: ಸಚಿವ ಆರ್ ಅಶೋಕ

Tuesday, July 13th, 2021
R Ashok

ಬೆಂಗಳೂರು  : ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಕರ್ನಾಟಕ ಸರ್ಕಾರ ಸಜ್ಜಾಗಿದ್ದು, ಮಕ್ಕಳನ್ನ ಇದರಿಂದ ರಕ್ಷಿಸುವುದೇ ನಮ್ಮ ಪ್ರಥಮ ಆದ್ಯತೆಯಾಗಿದೆ” ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ಹೇಳಿದರು. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ತಜ್ಞರ ಶಿಫಾರಸುಗಳ ಆಧಾರದ ಮೇಲೆ, ನಾವು ಈಗಾಗಲೇ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಔಷಧಿಗಳನ್ನು ಸಂಗ್ರಹಿಸುವುದರ ಜೊತೆಗೆ ಮಕ್ಕಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ವೈದ್ಯರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. […]

ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ : ತಜ್ಞರ ಸಮಿತಿ ಸಲಹೆ

Tuesday, June 22nd, 2021
yedyurappa

ಬೆಂಗಳೂರು  :  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ  ಕೋವಿಡ್ 19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಇದೆ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ತಜ್ಞರ ಸಮಿತಿ ಅಧ್ಯಕ್ಷ ಡಾ: ದೇವಿಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಮುಖ್ಯಾಂಶಗಳು : ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ […]

ಸಂಭವನೀಯ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಅಗತ್ಯದ ಸಿದ್ದತೆಗೆ ಈಗಿನಿಂದಲೇ ಕ್ರಮ ಜರುಗಿಸಿ

Monday, June 7th, 2021
Gadaga

ಗದಗ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿರುವದು ಸಮಾಧಾನಕರವಾದ ಸಂಗತಿಯಾಗಿದೆ. ತಜ್ಞರ ವರದಿಯಂತೆ ಮುಂದೆ ಬರಬಹುದಾದ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಅಧಿಕಾರಿಗಳು ಮೈಮರೆಯದೆ ಬೇಕಾದ ಅಗತ್ಯದ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಜ್ಞರ ವರದಿಯಂತೆ ಸಂಭವನೀಯ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಸಂಭವವಿದ್ದು […]

ಕೋವಿಡ್ 19 ಸೋಂಕಿನ ಮೂರನೇ ಅಲೆ ಅಪಾಯಕಾರಿ ಐಎಂಎ ಎಚ್ಚರಿಕೆ

Wednesday, May 19th, 2021
ima

ನವದೆಹಲಿ: ಕೋವಿಡ್ 19 ಸೋಂಕಿನ ಮೂರನೇ ಅಲೆ ಭಾರತದಲ್ಲಿ ಹರಡುವ ಸಾಧ್ಯತೆ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬುಧವಾರ ಎಚ್ಚರಿಸಿದ್ದು, ಅಲೆಯನ್ನು ಎದುರಿಸುವುದು ಕಷ್ಟ ಎಂದಿದೆ. ಮಕ್ಕಳು, ವಯಸ್ಸಾದವರು ಎಚ್ಚರಿಕೆಯಿಂದಿರಬೇಕು. ಲಸಿಕೆ ತೆಗೆದುಕೊಳ್ಳವಿಕೆಯೊಂದೇ ದಾರಿಯಾಗಿದೆ ಎಂದು ಸಲಹೆ ನೀಡಿದೆ. ಕೋವಿಡ್ 3ನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಕೋವಿಡ್ ಲಸಿಕೆಯನ್ನು ನೀಡುವುದು ಉತ್ತಮ ಎಂದು ಐಎಂಎ ಸಲಹೆ ನೀಡಿದೆ. ಒಂದು ವೇಳೆ ನಾವು ಬೃಹತ್ ಪ್ರಮಾಣದಲ್ಲಿ ಲಸಿಕೆ ನೀಡಲು ಮುಂದಾಗದಿದ್ದರೆ, ಮೂರನೇ ಅಲೆಯನ್ನು ಎದುರಿಸುವುದು ಕಷ್ಟ ಮತ್ತು […]