ಮತದಾನದ ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

Thursday, May 10th, 2018
wheather

ಬೆಂಗಳೂರು: ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಓಡಿಶಾ, ಆಸ್ಸೋಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಮಧ್ಯೆ […]

ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ… ಅತಂತ್ರದಲ್ಲಿ ಮೇಘಾಲಯ!

Saturday, March 3rd, 2018
nagaland

ನಾಗಾಲ್ಯಾಂಡ್: ಮೂರು ರಾಜ್ಯಗಳ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು ಕುತೂಹಲ ಹೆಚ್ಚಿಸಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುಂದಕ್ಕೆ ಸಾಗಿದ್ರೆ, ಇತ್ತ ಮೇಘಾಲಯದಲ್ಲಿ ಕಾಂಗೈ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಒಟ್ಟು ಇರುವ 59 ಕ್ಷೇತ್ರಗಳ ಪೈಕಿ ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನುಳಿದಂತೆ ಸಿಪಿಎಂ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದ್ರೆ ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನದಲ್ಲೂ ಮುನ್ನಡೆ ಸಿಕ್ಕಿಲ್ಲ. ಈಶಾನ್ಯ […]