ಜಲ್ಲಿ ಸಾಗಿಸುವ ಲಾರಿ ಕಾರಿಗೆ ಡಿಕ್ಕಿಯಾಗಿ ಕಾರು ಜಖಂ

Thursday, November 9th, 2023
car-accident

ಬಂಟ್ವಾಳ : ಜಲ್ಲಿ ಸಾಗಿಸುವ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಮುಂಬಾಗ ಜಖಂ ಗೋಂಡಿದ್ದು, ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಮೈಸೂರು ಮೂಲದ ಕೃಷ್ಣ ಅರಸ ಎಂಬವರು ಮೂಡಬಿದ್ರೆಗೆ ಸಂಚರಿಸುವಾಗ ಕಾರಿಗೆ ಲಾರಿ ಡಿಕ್ಕಿಯಾಗಿದೆ. ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈಶ್ವರಮಂಗಲ : ಪೋಟೋಗ್ರಾಫರ್‌ ಒಬ್ಬರನ್ನು ಹತ್ಯೆಗೈದು ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಹೂತು ಹಾಕಿದ ಮಾವ

Wednesday, November 24th, 2021
Jagadish Shetty

ಸುಳ್ಯ  : ಪೋಟೋಗ್ರಾಫರ್‌ ಒಬ್ಬರನ್ನು ಹತ್ಯೆಗೈದು ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಹೂತು ಹಾಕಿರುವ ಘಟನೆ, ನಾಪತ್ತೆಯಾದ ಐದು ದಿನಗಳ ಬಳಿಕ  ಸುಳ್ಯ ತಾಲೂಕಿನ ಈಶ್ವರಮಂಗಲದಲ್ಲಿ  ನ.24 ರಂದು ಬೆಳಕಿಗೆ ಬಂದಿದೆ. ಕೊಲೆಯಾದವರನ್ನು  ಮಂಗಳೂರು ಹೊರವಲಯ ಕೂಳೂರು ಸಮೀಪದ ಶಿವನಗರ ನಿವಾಸಿ ದಿ. ಶಂಭು ಶೆಟ್ಟಿಯವರ ಪುತ್ರ , ಪ್ರಸ್ತುತ ಮೈಸೂರಿನ ಸುಬ್ರಹ್ಮಣ್ಯ ನಗರ ನಿವಾಸಿ ಯಾಗಿರುವ  ಜಗದೀಶ್ ಶೆಟ್ಟಿ (58ವ) ಎಂದು ಗುರುತಿಸಲಾಗಿದೆ. ಜಗದೀಶ್ ಶೆಟ್ಟಿ ತನ್ನ ಕೃಷಿ ಜಮೀನು ನೋಡಲು ಮೈಸೂರಿನಿಂದ ಪುತ್ತೂರಿಗೆ ಆಗಮಿಸಿ  […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಬೆಂಗಳೂರಿನಲ್ಲಿ ಆರೋಪಿ ವಶಕ್ಕೆ

Thursday, September 23rd, 2021
Rape-Accused

ಮಂಗಳೂರು : ಮೈಸೂರಿನ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಯುವತಿ ತನಗೆ ಮೋಸ ಆಗಿದೆ ಎಂದು ಮಂಗಳೂರಿನ ಮುಡಿಪುವಿನಲ್ಲಿರುವ ಯುವಕನ ಮನೆಗೆ ಬಂದಿದ್ದಾಳೆ. ಈ ವೇಳೆ ಯುವಕನ ಮನೆಯಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿ ಮನೆಯಿಂದ ಹೊರ ಕಳುಹಿಸಿದ್ದಾರೆ. ಇದರಿಂದ ಬೇಸರಗೊಂಡ ಯುವತಿ ಬಸ್ ತಂಗುದಾಣದಲ್ಲಿ ಅಳುತ್ತಾ ಕುಳಿತಿದ್ದಳು. ಪೊಲೀಸರಿಗೆ ಮಾಹಿತಿ ಸಿಕ್ಕಿ […]

ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ

Monday, August 9th, 2021
CM Mysuru

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು  ಉಪಸ್ಥಿತರಿದ್ದರು.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಜ್ಜಾದ ಭೂಮಾಫಿಯಾ

Wednesday, June 2nd, 2021
Rohini-Sindhoori

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಬೇಕೆನ್ನುವ ರಾಜಕೀಯ ನಾಯಕರ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಇದರ ಹಿಂದೆ ಭೂಮಾಫಿಯಾ ಕೈವಾಡ ಶಂಕೆ ಕೇಳಿಬಂದಿದೆ. ಕರೊನಾ ನಡುವೆಯೂ ಭೂ ಅಕ್ರಮದ ದೂರುಗಳಿಗೆ ಸಂಬಂಧಿಸಿದ ಫೈಲ್ಗಳನ್ನು ವಿಲೇವಾರಿ ಮಾಡುವ ಪ್ರಯತ್ನಕ್ಕೆ ರೋಹಿಣಿ ಸಿಂಧೂರಿ ಕೈಹಾಕಿ ಭೂಗಳ್ಳರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ರಿಯಲ್ ಎಸ್ಟೇಟ್ ಉದ್ಯಮಿಗಳ ಹಿಂದೆಯೂ ರೋಹಿಣಿ ಬಿದ್ದಿದ್ದಾರೆ. ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವವರ ಎದೆಯಲ್ಲಿ ನಡುಕು ಶುರುವಾಗಿದ್ದು, ಕ್ರಮಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಿಸುವ ಪ್ರಯತ್ನ […]

ಮೈಸೂರು : ಕೊರೊನಾದಿಂದ ಮೃತ ತಂದೆಯ ಹೆಣ ಬೇಡ ಹಣ ಬೇಕು ಅಂದ ಮಗ

Sunday, May 23rd, 2021
Mysore corona

ಮೈಸೂರು: ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗ ಹೇಳಿರುವ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ. ತಂದೆಯ ಶವ ಕೂಡ ನೋಡಲು ಬಾರದ ಮಗ, ತಂದೆ ಶವ ಬೇಡ, ಹಣ ಬೇಕು ಎಂದು  ಆತನಿಗೆ ಕರೆ ಮಾಡಿ ವಿಷಯ ತಿಳಿಸಿದವರಿಗೆ ಹೇಳಿದ್ದಾನೆ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ತಂದೆಯ ಶವ ನೀವೇ ಸುಟ್ಟು ಹಾಕಿ, […]

ಪುತ್ತೂರು : ಲಾರಿ-ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

Monday, May 17th, 2021
Seetharam

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ತೆಂಕಿಲ ಎಂಬಲ್ಲಿ  ಲಾರಿ ಮತ್ತು ಸ್ಕೂಟರೊಂದರ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸೀತಾರಾಮ ಭಟ್ ಎಂದು ಗುರುತಿಸಲಾಗಿದೆ. ಸೀತಾರಾಮ ಭಟ್ ಬೆಳ್ಳಾರೆಯಿಂದ ತನ್ನ ಸ್ಕೂಟರ್‌ನಲ್ಲಿ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತೆಂಕಿಲದಲ್ಲಿ ಮುಂಭಾಗದಿಂದ ಆಗಮಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು […]

ಕೊರೋನಾ ಸೋಂಕಿತ ಯುವಕನಿಗೆ ಕಲ್ಲಿನಿಂದ ಹೊಡೆದು ಗ್ರಾಮಬಿಟ್ಟು ಹೋಗುವಂತೆ ಬೆದರಿಕೆ

Saturday, May 15th, 2021
Stone

ಮೈಸೂರು: ಇತರರಿಗೂ ಸೋಂಕು ತಗಲುವ ಹಿನ್ನೆಲೆಯಲ್ಲಿ ಗ್ರಾಮಬಿಟ್ಟು ಹೋಗುವಂತೆ ಕೊರೋನಾ ಸೋಂಕಿತ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಂಚಾಯತ್ ಸದಸ್ಯರು ಯುವಕನಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರು. ಆದರೆ, ಮನೆ ಬಳಿ ಕುಳಿತಿದ್ದ ಮುತ್ತೇ ಗೌಡ ಹಾಗೂ ಬಲರಾಮ್ ಎಂಬ ಕಿಡಿಕೇಡಿಗಳು ಗುಂಪು ಸೇರಿಸಿ ಸೋಂಕಿತನ ಮೇಲೆ ಏಕಾಏಕಿ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಅಲ್ಲದೆ, ಇತರೆ […]

ಪೊಲೀಸರ ಲಾಠಿ ಏಟು, ನೆಲಕ್ಕುರುಳಿದ ಬೈಕು ಸವಾರನ ಮೇಲೆ ಲಾರಿ ಹರಿದು ಸಾವು, ಪೋಲೀಸರ ಮೇಲೆ ಹಲ್ಲೆ

Tuesday, March 23rd, 2021
Mysore Accident

ಮೈಸೂರು : ಹೆಲ್ಮೆಟ್ ಹಾಕಿಲ್ಲವೆಂದು ಬೈಕ್ ಸವಾರನಿಗೆ ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದಿದ್ದಾಗ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಹಿಂಬದಿಯಿಂದ ಲಾರಿ ಹರಿದು ಸಾವಿಗೀಡಾಗಿರುವ ದಾರುಣ ಘಟನೆ ನಗರದ ಹೊರವಲಯದ ಹಿನಕಲ್ ರಿಂಗ್ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಎಚ್.ಡಿ.ಕೋಟೆ ಮೂಲದ ದೇವರಾಜು ಎಂದು ಗುರುತಿಸಲಾಗಿದೆ. ಈತನ ಜೊತೆ ಇದ್ದ ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಹಾಕದೆ ಸಂಚರಿಸುತ್ತಿದ್ದಾಗ ಪೊಲೀಸರು ಬೈಕ್ ಸವಾರನಿಗೆ ನಿಲ್ಲಿಸಲು ಸೂಚನೆ ನೀಡಿದ್ದಾರೆ. ಆದರೆ ಸವಾರ ಬೈಕ್ ನಿಲ್ಲಿಸದಿದ್ದಾಗ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಬೈಕ್ […]