ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಕಿತ್ತಾಟ, ವರ್ಗಾವಣೆಯಲ್ಲಿ ಅಂತ್ಯ

Sunday, June 6th, 2021
Rohini Sindhoori-Shilpa Nag

ಬೆಂಗಳೂರು : ರಾಜ್ಯ ಸರ್ಕಾರ ತಡರಾತ್ರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ  ಮಾಡಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದರೆ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಇಂದು ಬೆಳಗ್ಗೆಯೇ ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಲು ಮುಂದಾಗಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ […]

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ರಾಜೀನಾಮೆ ಸಲ್ಲಿಸಲು ಕಾರಣವಾದ ವಿಷಯ ಇಲ್ಲಿದೆ ನೋಡಿ !

Friday, June 4th, 2021
shilpa Nagesh

ಮೈಸೂರು: ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಕೇಸ್ ಇಲ್ಲದ ಏರಿಯಾಗಳನ್ನ ರೆಡ್ ಜೋನ್ ಅಂತಾ ಘೋಷಣೆ ಮಾಡಿದ್ದಾರೆ.  ಪಾಲಿಕೆಯ ಕೆಳ ಹಂತದ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವುದನ್ನು ನಾನು ಸಹಿಸುವುದಿಲ್ಲಎಂದು  ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಆರೋಪ  ಹೊರಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಸೂಕ್ತವಾಗಿ ಕೊರೋನಾ ನಿರ್ವಹಣೆ ಮಾಡಿದರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗುತ್ತಿದೆ. ಸಿಎಸ್‌ಆರ್ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ […]

ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ತಸ್ಲೀಂ ಆಯ್ಕೆ

Saturday, January 18th, 2020
taslim

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜೆಡಿಎಸ್ ನ ತಸ್ಲೀಂ ಆಯ್ಕೆಯಾಗಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಮಹಿಳೆ ಮೇಯರ್ ಆಗಿ ಆಯ್ಕೆಯಾಗಿದ್ದು, 47 ಮತಗಳಿಂದ ತಸ್ಲೀಂ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮುಸ್ಲಿಂ ಮಹಿಳಾ ಮೇಯರ್ ಆಗಿ ಅಧಿಕಾರ ನಡೆಸಲಿದ್ದಾರೆ. ತಸ್ಲೀಂ 47 ಮತಗಳನ್ನು ಪಡೆದಿದ್ದು, ಬಿಜೆಪಿಯ ಗೀತಾ ಯೋಗಾನಂದ್ 23 ಮತಗಳನ್ನು ಪಡೆದಿದ್ದಾರೆ.  

ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Saturday, January 18th, 2020
meyor

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್‌‌ನಿಂದ ವಾರ್ಡ್ ನಂ 26ರ ಸದಸ್ಯೆಯಾಗಿರುವ ತಸ್ಲಿಮ್ ಜೆಡಿಎಸ್ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಗೀತಾಶ್ರೀ ಯೋಗಾನಂದ್ ನಾಮಪತ್ರ ಸಲ್ಲಿಸಿದರು. ಶಾಂತಮ್ಮ ವಡಿವೇಲು ಉಪ ಮೇಯರ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪಾಲಿಕೆಯ ವಿರೋಧ ಪಕ್ಷದ ನಾಯಕ ಬಿ.ವಿ ಮಂಜುನಾಥ್ ಜೊತೆ ಸೇರಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಗಳು ಸಂಖ್ಯಾಬಲ […]