ಮಂಗಳೂರಿನ ಶಿಲ್ಪಾರ ಯಶೋಗಾಥೆ ಮೆಚ್ಚಿದ ಆನಂದ್ ಮಹೀಂದ್ರ
Monday, January 8th, 2018ಮಂಗಳೂರು: ಬದುಕು ಎನ್ನುವುದು ಯುದ್ದ ಭೂಮಿ. ಇಲ್ಲಿ ಎದುರಾಗುವ ಕಷ್ಟಗಳಿಗೆ ಹೆದರಿ ಬೆನ್ನು ತೋರಿಸಿದರೆ ಬದುಕು ದುರಂತದಲ್ಲಿಯೇ ಅಂತ್ಯವಾಗುತ್ತದೆ. ಆದರೆ ಎದೆಗುಂದದೇ ಮುನ್ನುಗ್ಗಿದರೆ ಬದುಕು ಹಸನಾಗುವುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಮಂಗಳೂರಿನ ಮಣ್ಣಗುಡ್ಡೆಯ ಹಳ್ಳಿಮನೆ ರೊಟ್ಟಿಸ್ ಮೊಬೈಲ್ ಕ್ಯಾಂಟೀನ್ ಮಾಲಕಿ ಶಿಲ್ಪಾ. ಮಂಗಳೂರಿನ ಬೀದಿಯಲ್ಲಿ ರೊಟ್ಟಿ ಮಾರುವ ಶಿಲ್ಪಾರ ಯಶೋಗಾಥೆ ಈಗ ಮಹೀಂದ್ರ ಕಂಪನಿಯ ಮುಖ್ಯಸ್ಥರ ಗಮನ ಸೆಳೆದಿದೆ. ಮಾಧ್ಯಮದ ಮೂಲಕ ಈಕೆಯ ಸಾಧನೆ ಮತ್ತು ವೇದನೆಯ ಬಗ್ಗೆ ತಿಳಿದ ಮಹಿಂದ್ರ ಕಂಪನಿಯ ಮುಖ್ಯಸ್ಥ […]