ಸುರತ್ಕಲ್ ನಲ್ಲಿ ನಿಷೇಧಿತ ಮಾದಕ ದ್ರವ್ಯ ಮಾರಾಟ : ಇಬ್ಬರ ಬಂಧನ
Saturday, September 21st, 2019ಮಂಗಳೂರು : ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಟ್ಟ ಹಾಕುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್ ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಮುಜಾಮಿಲ್ (40), ಚೊಕ್ಕಬೆಟ್ಟುವಿನ ಪರಮೇಶ್ವರಿ ನಗರ ನಿವಾಸಿ ಮೊಹಮ್ಮದ್ ಶರೀಫ್ ಸಿದ್ದಿಕ್(40) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸ್ ನಿರೀಕ್ಷಕ ಮತ್ತು ವಿಶೇಷ ಅಪರಾಧ ಪತ್ತೆ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆರೋಪಿಗಳ ಕಾರು ಪರಿಶೀಲಿಸಿದಾಗ ಮಾನವ ಜೀವಕ್ಕೆ ಅಪಾಯ […]