ಬೆಂಗಳೂರು: ಮತ್ತೊಂದು ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 5 ಏರಿಕೆ, 1 ಬಲಿ
Thursday, March 12th, 2020ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ 5 ಏರಿಕೆಯಾಗಿದೆ. ಸೌದಿ ಅರೇಬಿಯಾದಿಂದ ಕೆಲ ದಿನಗಳ ಹಿಂದೆ ಆಗಮಿಸಿದ್ದ ಕಲಬುರಗಿಯ 76 ವರ್ಷದ ವೃದ್ಧ ಕೊರೋನಾ ವೈರಸ್ ನಿಂದಲೇ ಸಾವನ್ನಪ್ಪಿರುವುದು ಇದೀಗ ದೃಢಪಟ್ಟಿದೆ. ವೃದ್ದ ಕೊರೋನಾದಿಂದಲೇ ಮೃತಪಟ್ಟಿರುವುದು ಹೌದೆಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಮೃತಪಟ್ಟವರು ಮೊಹಮ್ಮದ್ ಹುಸೈನ್ ಸಿದ್ದಿಕಿ ಕಲಬುರಗಿ ಎಂದು ಗುರುತಿಸಲಾಗಿದೆ. ರಾಜಧಾನಿಯಲ್ಲಿ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಸೂಕ್ತ […]