ಮೋದಿ ಸರ್ಕಾರದಿಂದ ಬಡವರ ಹಿತರಕ್ಷಣೆ – ನಳಿನ್‌ಕುಮಾರ್ ಕಟೀಲ್ ಹೇಳಿಕೆ
Tuesday, June 30th, 2020ಮಂಗಳೂರು : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ಅಂತ್ಯದವರೆಗೆ ವಿಸ್ತರಿಸುವ ಮೂಲಕ ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಬಡವರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಒದಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ದೇಶದ ಆರ್ಥಿಕ ಚಟುವಟಿಕೆ ಬಲಪಡಿಸಲು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೀಗ ಹಬ್ಬಗಳನ್ನು ಗಮನದಲ್ಲಿರಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಹಾಗೂ ಇತರ ಯೋಜನೆಗಳನ್ನು ದೀಪಾವಳಿ […]