ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

Thursday, September 21st, 2023
ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೃದಯಾಘಾತದಿಂದ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ, ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಅಪಾರ ಬಂಧುಗಳು, ಅಭಿಮಾನಿಗಳು ಇದ್ದಾರೆ.

ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹೃದಯಾಘಾತದಿಂದ ನಿಧನ

Tuesday, October 12th, 2021
Padyana Ganapathi Bhat

ಸುಳ್ಯ : ಖ್ಯಾತ ತೆಂಕುತಿಟ್ಟಿನ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ (67) ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 7.45ಕ್ಕೆ ಅವರು ಕೊನೆಯುಸಿರೆಳೆದರು. ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಕುಟುಂಬದಲ್ಲಿ  1955ರ ಜನವರಿ 21ರಂದು ಕಲ್ಮಡ್ಕ ಗ್ರಾಮದಲ್ಲಿ ಪದ್ಯಾಣ ತಿರುಮಲೇಶ್ವರ ಭಟ್ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ ಗಣಪತಿ ಭಟ್ ಅವರು  ಜನಿಸಿದರು. ಬಾಲ್ಯದಿಂದಲೇ ಯಕ್ಷಗಾನದಲ್ಲಿ ಆಸಕ್ತಿ ಹೊಂದಿದ್ದ ಇವರು ಧರ್ಮಸ್ಥಳದ ಯಕ್ಷಗಾನ ತರಬೇತಿ ಕೇಂದ್ರದಲ್ಲಿ […]

ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

Sunday, September 27th, 2020
Tirumaleshwara Sastri

ಮಂಗಳೂರು : ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ ಪ್ರಶಸ್ತಿಗಳಲ್ಲದೆ ಹಲವು ಪುರಸ್ಕಾರ, ಸಮ್ಮಾನಗಳಿಗೆ ಭಾಜನರಾಗಿದ್ದರು. 1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ […]