ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ

Saturday, October 17th, 2020
Mysuru Dasara

ಮೈಸೂರು:   ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 7:4ರಿಂದ 8:15ರ  ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ […]

ಯಡಿಯೂರಪ್ಪ ಹಸಿರು ಶಾಲು ಹೊದ್ದು ಅಧಿಕಾರಕ್ಕೇರಿ ಇದೀಗ ರೈತರಿಗೆ ಮೋಸ ಮಾಡಿದ್ದಾರೆ : ಐವನ್

Monday, September 28th, 2020
farmers Protest

ಮಂಗಳೂರು :  ಕರ್ನಾಟಕ ಬಂದ್ ಪ್ರಯುಕ್ತ ನಗರದ ಮಿನಿ ವಿಧಾನ ಸೌಧದ ಎದುರು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ, ಜಿಲ್ಲಾ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟ  ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿತು. ಕಾರ್ಪೊರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಅಂಬಾನಿ- ಅದಾನಿಗೆ ನೆರವಾಗುವ ನಿಟ್ಟಿನಲ್ಲಿ ಮಾಡಲಾದ ಕಾನೂನು ತಿದ್ದುಪಡಿಯಾಗಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ, ವ್ಯಾಪಾರ ವರ್ಗದ ಅನುಮತಿ, […]

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢ, ಪುತ್ರಿಗೂ ಸೋಂಕು ದೃಢ

Monday, August 3rd, 2020
cm-yediyurappa

ಬೆಂಗಳೂರು :  ಕರ್ನಾಟಕ  ಸಿಎಂ ಯಡಿಯೂರಪ್ಪ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. “ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು” ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ […]

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೋವಿಡ್19 ಭಾಷಣ

Tuesday, July 21st, 2020
yediyurappa

ಬೆಂಗಳೂರು : ರಾಜ್ಯದ ಹಲವು ಕಡೆ  ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ  ಭಾಷಣ ನೇರ ಪ್ರಸಾರ.

ಪಕ್ಷ ಬೆಳೆಸುವಲ್ಲಿ ಪಾಟ್ಕರ್ ಪಾತ್ರ ಸ್ಮರಿಸಿದ ಯಡಿಯೂರಪ್ಪ : ಬಿಜೆಪಿ ಹಿರಿಯ ಮುಖಂಡ ಡಾ.ಪಾಟ್ಕರ್ ಮನೆಗೆ ಸಿಎಂ ಭೇಟಿ

Tuesday, January 28th, 2020
patkar

ಮಡಿಕೇರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿಯಲ್ಲಿರುವ ಬಿಜೆಪಿ ಹಿರಿಯ ಮುಖಂಡ ಡಾ.ಎಂ.ಜಿ.ಪಾಟ್ಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಡಿಕೇರಿಯ ರೋಟರಿ ಸಭಾಂಗಣ ಬಳಿಯಲ್ಲಿನ ಡಾ.ಎಂ.ಜಿ.ಪಾಟ್ಕರ್ ಮನೆಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಹಲವಾರು ವಷ೯ಗಳ ಹಿಂದಿನಿಂದಲೂ ಕೊಡಗಿನಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟಿಸುವಲ್ಲಿ ಕಾರಣರಾದ ಡಾ.ಎಂ.ಜಿ.ಪಾಟ್ಕರ್ ದಂಪತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೊಡಗಿನಲ್ಲಿ ಬಿಜೆಪಿಗೆ ಕಛೇರಿ ಇಲ್ಲದ ವಷ೯ಗಳಲ್ಲಿ ಡಾ.ಪಾಟ್ಕರ್ ತಮ್ಮ ಮನೆಯಲ್ಲಿಯೇ ಪಕ್ಷದ ಬೆಳವಣಿಗೆಗೆ ಅವಕಾಶ ಕಲ್ಪಿಸಿದ್ದರು. ಕೊಡಗಿನಲ್ಲಿ ಬಿಜೆಪಿ ಸಂಘಟಿಸುವಲ್ಲಿಯೂ ಡಾ.ಪಾಟ್ಕರ್ ಅವರ ಪಾತ್ರ ಮುಖ್ಯವಾದದ್ದು […]

ಅಮಿತ್ ಶಾ, ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್​ನಿಂದ ಬೃಹತ್​ ಪ್ರತಿಭಟನೆ

Tuesday, November 5th, 2019
Pratibhatane

ಬೆಂಗಳೂರು: ವೈರಲ್ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿಡಿಯೋ ಸಂಭಾಷಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದಾರೆ. ಇಬ್ಬರೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಎಂ.ಜಿ. ರಸ್ತೆಯ ಟ್ರಿನಿಟಿ ವೃತ್ತದ ವಿಜಯ ಬ್ಯಾಂಕ್ ಜಂಕ್ಷನ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ವಿವಿಧ ನಾಯಕರು ಭಾಗಿಯಾಗಿದ್ದರು. ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. […]

ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಅಧ್ಯಕ್ಷ ಸ್ಥಾನ ನೀಡಲು ಸಿಎಂ ಬಿ.ಎಸ್ ಯಡಿಯೂರಪ್ಪ ಆದೇಶ

Thursday, October 17th, 2019
BMTC

ಬೆಂಗಳೂರು : ಉಪ ಚುನಾವಣೆಯಲ್ಲಿ ಕೆ ಆರ್ ಪುರಂ ಟಿಕೆಟ್ ಆಕಾಂಕ್ಷಿಯ ಬಂಡಾಯ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಜಿ ಶಾಸಕ ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಉಪಾಧ್ಯಕ್ಷ ಸ್ಥಾನದ ಬದಲು ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಶಾಸಕ ನಂದೀಶ್ ರೆಡ್ಡಿಯನ್ನು ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ಆದರೆ ಉಪಾಧ್ಯಕ್ಷ ಸ್ಥಾನಕ್ಕೆ ಒಪ್ಪದ ಪರಾಜಿತ ಅಭ್ಯರ್ಥಿ ನಂದೀಶ್ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿರಲಿಲ್ಲ ಹೀಗಾಗಿ ಈಗ ಬಿಎಂಟಿಸಿ ಅಧ್ಯಕ್ಷರಾಗಿ ಮಾಜಿ ಶಾಸಕ ಎನ್ […]

ಲಿಂಗಾಯತ ಮಾತ್ರವಲ್ಲ, ಯಾವುದೇ ಸಮುದಾಯದ ನಿರ್ಬಂಧ ಸರಿಯಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ್

Tuesday, October 15th, 2019
MB-Patil

ಬೆಂಗಳೂರು : ಯಾವುದೇ ಸಮುದಾಯಕ್ಕೆ ತಮ್ಮ ಪಕ್ಷದ ಕಚೇರಿಗೆ ಬರಬೇಡಿ ಎಂದು ಹೇಳೋದು ಸರಿಯಲ್ಲ. ಇದು ತಪ್ಪು ಕೆಲಸ ಎಂದು ಲಿಂಗಾಯತರಿಗೆ ಬಿಜೆಪಿ ಕಚೇರಿಗೆ ನಿರ್ಬಂಧ ವಿಚಾರ ಸಂಬಂಧ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ಕಚೇರಿಗೆ ಲಿಂಗಾಯತ ಸಮುದಾಯ ನಿರ್ಬಂಧ ವಿಷಯ ಸತ್ಯ, ಆದರೆ ಅದು ಬಹಳ ತಪ್ಪು ನಿರ್ಧಾರವಾಗಲಿದೆ. ಲಿಂಗಾಯತರ ಬೆಂಬಲ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಸಿಕ್ಕಿದೆ. ಇಷ್ಟಾದರೂ ಈ ರೀತಿ ಅಪಮಾನ ಸರಿಯಲ್ಲ. ಯಡಿಯೂರಪ್ಪ ಆದಿಯಾಗಿ […]

ಕನಿಷ್ಠ ಆರು ದಿನ ಅಧಿವೇಶನ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

Friday, October 11th, 2019
siddaramaiah

ಬೆಂಗಳೂರು : ವಿಧಾನಸಭೆ ಕಲಾಪವನ್ನು ಇನ್ನೂ ಆರು ದಿನ ವಿಸ್ತರಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಕೇವಲ ಮೂರು ದಿನ ಮಾತ್ರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮೂರು ದಿನ ನೆರೆ ಹಾಗೂ ಕನಿಷ್ಠ ಮೂರು ದಿನ ಬಜೆಟ್ ಕುರಿತು ಚರ್ಚೆ ನಡೆಯಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇವೆಲ್ಲವೂ ಚರ್ಚೆಯಾಗುತ್ತಿತ್ತು, ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿಲ್ಲ ಯಡಿಯೂರಪ್ಪನವರೇ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರ, ನಿಮಗೆಲ್ಲಾ ತಿಳಿದಿದೆ ಪಲಾಯನವಾದ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಿದ್ದ […]

ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ : ಗೌರವ ಸಲ್ಲಿಸಿದ ಬಿ.ಎಸ್ ಯಡಿಯೂರಪ್ಪ

Wednesday, October 2nd, 2019
lal-bahuddur-shastri

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನದ ಪ್ರಯುಕ್ತ ವಿಧಾನ ಸೌಧದ ಆವರಣದಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹಾಗು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸರ್ಕಾರದ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಉಪಸ್ಥಿತರಿದ್ದರು.