Blog Archive

ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಅಧ್ಯಕ್ಷ ಸ್ಥಾನ ನೀಡಲು ಸಿಎಂ ಬಿ.ಎಸ್ ಯಡಿಯೂರಪ್ಪ ಆದೇಶ

Thursday, October 17th, 2019
BMTC

ಬೆಂಗಳೂರು : ಉಪ ಚುನಾವಣೆಯಲ್ಲಿ ಕೆ ಆರ್ ಪುರಂ ಟಿಕೆಟ್ ಆಕಾಂಕ್ಷಿಯ ಬಂಡಾಯ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಜಿ ಶಾಸಕ ನಂದೀಶ್ ರೆಡ್ಡಿಗೆ ಬಿಎಂಟಿಸಿ‌ ಉಪಾಧ್ಯಕ್ಷ ಸ್ಥಾನದ ಬದಲು ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಶಾಸಕ ನಂದೀಶ್ ರೆಡ್ಡಿಯನ್ನು ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ಆದರೆ ಉಪಾಧ್ಯಕ್ಷ ಸ್ಥಾನಕ್ಕೆ ಒಪ್ಪದ ಪರಾಜಿತ ಅಭ್ಯರ್ಥಿ ನಂದೀಶ್ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿರಲಿಲ್ಲ ಹೀಗಾಗಿ ಈಗ ಬಿಎಂಟಿಸಿ ಅಧ್ಯಕ್ಷರಾಗಿ ಮಾಜಿ ಶಾಸಕ ಎನ್ […]

ಲಿಂಗಾಯತ ಮಾತ್ರವಲ್ಲ, ಯಾವುದೇ ಸಮುದಾಯದ ನಿರ್ಬಂಧ ಸರಿಯಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ್

Tuesday, October 15th, 2019
MB-Patil

ಬೆಂಗಳೂರು : ಯಾವುದೇ ಸಮುದಾಯಕ್ಕೆ ತಮ್ಮ ಪಕ್ಷದ ಕಚೇರಿಗೆ ಬರಬೇಡಿ ಎಂದು ಹೇಳೋದು ಸರಿಯಲ್ಲ. ಇದು ತಪ್ಪು ಕೆಲಸ ಎಂದು ಲಿಂಗಾಯತರಿಗೆ ಬಿಜೆಪಿ ಕಚೇರಿಗೆ ನಿರ್ಬಂಧ ವಿಚಾರ ಸಂಬಂಧ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ಕಚೇರಿಗೆ ಲಿಂಗಾಯತ ಸಮುದಾಯ ನಿರ್ಬಂಧ ವಿಷಯ ಸತ್ಯ, ಆದರೆ ಅದು ಬಹಳ ತಪ್ಪು ನಿರ್ಧಾರವಾಗಲಿದೆ. ಲಿಂಗಾಯತರ ಬೆಂಬಲ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಸಿಕ್ಕಿದೆ. ಇಷ್ಟಾದರೂ ಈ ರೀತಿ ಅಪಮಾನ ಸರಿಯಲ್ಲ. ಯಡಿಯೂರಪ್ಪ ಆದಿಯಾಗಿ […]

ಕನಿಷ್ಠ ಆರು ದಿನ ಅಧಿವೇಶನ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

Friday, October 11th, 2019
siddaramaiah

ಬೆಂಗಳೂರು : ವಿಧಾನಸಭೆ ಕಲಾಪವನ್ನು ಇನ್ನೂ ಆರು ದಿನ ವಿಸ್ತರಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಕೇವಲ ಮೂರು ದಿನ ಮಾತ್ರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮೂರು ದಿನ ನೆರೆ ಹಾಗೂ ಕನಿಷ್ಠ ಮೂರು ದಿನ ಬಜೆಟ್ ಕುರಿತು ಚರ್ಚೆ ನಡೆಯಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇವೆಲ್ಲವೂ ಚರ್ಚೆಯಾಗುತ್ತಿತ್ತು, ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿಲ್ಲ ಯಡಿಯೂರಪ್ಪನವರೇ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರ, ನಿಮಗೆಲ್ಲಾ ತಿಳಿದಿದೆ ಪಲಾಯನವಾದ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಿದ್ದ […]

ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ : ಗೌರವ ಸಲ್ಲಿಸಿದ ಬಿ.ಎಸ್ ಯಡಿಯೂರಪ್ಪ

Wednesday, October 2nd, 2019
lal-bahuddur-shastri

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನದ ಪ್ರಯುಕ್ತ ವಿಧಾನ ಸೌಧದ ಆವರಣದಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹಾಗು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸರ್ಕಾರದ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಉಪಸ್ಥಿತರಿದ್ದರು.    

ಬಿಬಿಎಂಪಿ ಮೇಯರ್ ಚುನಾವಣೆ ನಡೆಸಲು ನಮ್ಮ ಅಭ್ಯಂತರವಿಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ

Monday, September 30th, 2019
BSY

ಶಿವಮೊಗ್ಗ : ಮಂಗಳವಾರ ನಡೆಯುವ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಹೈಕೋರ್ಟ್ ಮುಂದೂಡಿತ್ತು. ಹೀಗಾಗಿ ಸ್ಥಾಯಿ ಸಮಿತಿಯೊಂದಿಗೆ ಮೇಯರ್ ಉಪಮೇಯರ್ ಚುನಾವಣೆ ನಡೆಸಲು ಉದ್ದೇಶಿಸಿದ್ದೆ. ಆದರೆ ನಾಳೆಯೇ ಮೇಯರ್ ಉಪಮೇಯರ್ ಚುನಾವಣೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ ನಾಳೆಯೇ ಚುನಾವಣೆ ನಡೆಯಲಿ. ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷರೊಂದಿಗೆ […]

15 ಅನರ್ಹ ಶಾಸಕರಿಗೆ ಉಪಚುನಾವಣೆ ಟಿಕೆಟ್ : ಬಿ ಎಸ್ ಯಡಿಯೂರಪ್ಪ

Monday, September 30th, 2019
BSY

ಶಿವಮೊಗ್ಗ : 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ‌ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಎಲ್ಲಾ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತೇವೆ. ಇದಕ್ಕೆ ಅಮಿತ್ ಶಾ ಕೂಡಾ ಒಪ್ಪಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ. ಅನರ್ಹ ಶಾಸಕರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕಳೆದ ಬಾರಿ […]

ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ : ಸಿದ್ದರಾಮಯ್ಯ

Monday, September 30th, 2019
siddaramaiah

ರಾಯಚೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ನಡೆಸುವುದು ತಂತಿ ಮೇಲೆ ನಡೆದಷ್ಟು ಕಷ್ಟವಾಗಿದ್ದರೆ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಲ್ಲಿನ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ತಂತಿ ಮೇಲೆ ನಡೆವಾಗ ಬಿದ್ದುಗಿದ್ದಾರು ಎಂದು ಲೇವಡಿ ಮಾಡಿದರು. ಅವರೊಬ್ಬ ವೀಕ್ ಚೀಫ್ ಮಿನಿಸ್ಟರ್. ಪಕ್ಷದಲ್ಲಿ ಅವರ ಆಟ ನಡೆಯುತ್ತಿಲ್ಲ. ರೆಕ್ಕೆ ಪುಕ್ಕ ಕತ್ತರಿಸಿಬಿಟ್ಟಿದ್ದಾರೆ ಎಂದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಆಗ ಸರ್ಕಾರ ವಿಸರ್ಜಿಸಿ ಮಧ್ಯಂತರ […]

ಕೇಂದ್ರದಿಂದ ಮುಖ್ಯಮಂತ್ರಿ ಯಡಿಯೂರಪ್ಪಗೆ ಅವಮಾನ, ನಮ್ಮೆಲ್ಲರಿಗೆ ಅವಮಾನ ಆದಂತೆ : ಯು.ಟಿ.ಖಾದರ್

Saturday, September 28th, 2019
UT-Khader

ಮಂಗಳೂರು : ಕೇಂದ್ರ ಸರ್ಕಾರ ಕರ್ನಾಟಕವನ್ನ ಕಡೆಗಣಿಸಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದೇ ಪದೇ ಅವಮಾನಿಸುತ್ತಿದೆ. ಮುಖ್ಯಮಂತ್ರಿಗೆ ಅವಮಾನ ನಮ್ಮೆಲ್ಲರಿಗೆ ಅವಮಾನ ಆದಂತೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರವು ಸಂತ್ರಸ್ಥರಿಗೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆಯನ್ನು ತೋರುತ್ತಿರುವುದು ಸಲ್ಲದು. ಕೇಂದ್ರ ರಾಜ್ಯಕ್ಕೆ ಸಿಗುವ ಪಾಲನ್ನು ನ್ಯಾಯಯುತವಾಗಿ ನೀಡಬೇಕು ಎಂದು ಎಚ್ಚರಿಸಿದರು. ಜೊತೆಗೆ ಮುಖ್ಯಮಂತ್ರಿಯವರನ್ನ ಕೇಂದ್ರ ಗೌರವದಿಂದ ಕಾಣಬೇಕು ಎಂದರು. ಈಗಾಗಲೇ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ಸು ಬಂದಿರುವ […]

ಸರ್ಕಾರದ ಆದೇಶ ಕೈ ಸೇರುವವರೆಗೂ ದುಬಾರಿ ದಂಡ ಮುಂದುವರಿಕೆ : ಭಾಸ್ಕರ್ ರಾವ್

Saturday, September 14th, 2019
baskar-rao

ಬೆಂಗಳೂರು : ಸರ್ಕಾರದಿಂದ ಅಧಿಕೃತ ಆದೇಶ ಬರುವವರೆಗೂ ದುಬಾರಿ ದಂಡ ಮುಂದುವರೆಸಲಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಳೆ ದಂಡವನ್ನೇ ವಿಧಿಸುವಂತೆ ರಾಜ್ಯ ಸರ್ಕಾರ ಹೇಳಿದೆ ಎನ್ನುವ ವಿಚಾರ ಇದೆ ಆದರೆ ಅಧಿಕೃತವಾಗಿ ಆದೇಶ ನಮಗೆ ಬಂದಿಲ್ಲ ಹಾಗಾಗಿ ಅಲ್ಲಿಯವರೆಗೂ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಪ್ರಕಾರ ಪರಿಷ್ಕೃತವಾಗಿರುವ ದಂಡವನ್ನೇ ವಿಧಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡ ವಾಹನ ಸವಾರರಿಗೆ ಹೊರೆಯಾಗಿದೆ ಎನ್ನುವ […]

ನೆರೆ ಪರಿಸ್ಥಿತಿಯನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7ರಂದು ರಾಜ್ಯಕ್ಕೆ ಭೇಟಿ : ಬಿಎಸ್. ಯಡಿಯೂರಪ್ಪ

Thursday, August 29th, 2019
modi

ಬೆಂಗಳೂರು : ರಾಜ್ಯವು ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಈ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಅಭಿಯಾನದ ಪ್ರಯುಕ್ತ ವಿಧಾನಸೌಧದ ಮುಂಭಾಗ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳನ್ನು ನಡೆಸಲು […]