Blog Archive

ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ

Friday, January 12th, 2018
yedeyorrappa

ತುಮಕೂರು: ಮುಂದಿನ ಚುನಾವಣೆಯಲ್ಲಿ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡಿದರೆ ನಿಮ್ಮ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಅವರು ಎಚ್ಚರಿಸಿದ್ದಾರೆ. ಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್‌ವೈ ಟ್ವೀಟ್ ಬಾಣ ಗುರುವಾರ ತುಮಕೂರಿನ ಶಿರಾದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, “ಮೂರು ನಾಲ್ಕು ತಿಂಗಳ ನಂತರ ನಾನು ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂಬುದನ್ನು ನಾನು […]

ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ: ಸಿದ್ದರಾಮಯ್ಯ ವ್ಯಂಗ್ಯ

Monday, January 8th, 2018
mangaluru

ಮಂಗಳೂರು: “ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. “ಕೆಲವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಬರುತ್ತದೆ ಎಂದು ಭಯವಿದೆ. ನಾನು ಸರಕಾರ ಹಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಗುಜಾರಾತ್ ಹಾಗೂ ವಿದೇಶಕ್ಕೆ ತಮ್ಮ ಸ್ವಂತ ದುಡ್ಡಿನಲ್ಲಿ ಹೋಗುತ್ತಾರಾ?,” ಎಂದು ಪ್ರಶ್ನಿಸಿದರು . ದಕ್ಷಿಣ […]

ಕರ್ನಾಟಕದಲ್ಲಿ ಮತಬೇಟೆಗೆ ಅಮಿತ್ ಶಾ ಹೊಸ ತಂತ್ರ!

Saturday, December 23rd, 2017
Amit-Shah

ಬೆಂಗಳೂರು: ಸೋಲು ಗೆಲುವು, ಏಳು ಬೀಳುಗಳ ಹಲವಾರು ರೋಚಕ, ನಾಟಕೀಯ ಕ್ಷಣಗಳನ್ನು ಕಂಡ ಗುಜರಾತ್ ಚುನಾವಣೆ ಇತಿಹಾಸದ ಪುಟಗಳನ್ನು ಸೇರಿಕೊಂಡಿದೆ. ಚುನಾವಣೆಯೆಂಬ ರಿಲೇಯಲ್ಲಿ ಕರ್ನಾಟಕಕ್ಕೆ ಓಟದ ಬೇಟನ್ ಕೊಟ್ಟು ಗುಜರಾತ್ ಹಿಂದೆ ಸರಿದುಕೊಂಡಿದೆ. ಗುಜರಾತ್ ಚುನಾವಣೆಯದ್ದು ಒಂದು ತೂಕವಾದರೆ ಕರ್ನಾಟಕದ್ದು ಅದನ್ನೂ ಮೀರಿಸುವಂಥ ತೂಕ. ಗುಜರಾತಿನಲ್ಲಿ ಭಾರತೀಯ ಜನತಾ ಪಕ್ಷದ ಗೆಲುವನ್ನು ಗೋಡೆಯ ಮೇಲೆ ಮೊದಲೇ ಬರೆಯಲಾಗಿತ್ತಾದರೂ, ಕೆಲವೊಂದು ನಾಟಕೀಯ ಕ್ಷಣಗಳನ್ನು, ಹೋರಾಟವನ್ನು ನೋಡಿದ್ದು, ಕ್ಲೈಮ್ಯಾಕ್ಸ ಮತ್ತಷ್ಟು ರೋಚಕವಾಗುವಂತೆ ಮಾಡಿತು. ಗುಜರಾತಿನಲ್ಲಿ ಬಿಜೆಪಿ ಗೆಲುವಿನ ರಹಸ್ಯ ಬಹಿರಂಗ […]

ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು

Thursday, December 21st, 2017
rajyapala

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ. ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ […]

ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಸನ್ನಿಹಿತ: ಯಡಿಯೂರಪ್ಪ

Tuesday, December 19th, 2017
bjp-karnataka

ಕೊಪ್ಪಳ: ಕಾಂಗ್ರೆಸ್ ಮುಕ್ತ ಭಾರತದ ಕನಸು ದೂರವಿಲ್ಲ. ಈಗಾಗಲೇ ಗುಜರಾತ್ ಮತ್ತು ಹಿಮಾಚಲದ ಜನತೆ ವಿಕಾಸಕ್ಕೆ ಜನಾದೇಶ ನೀಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಿದ್ದಾರೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಅಂತ್ಯ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಕುಕನೂರಿನಲ್ಲಿಂದು ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಮುರುಗೇಶ್ ನಿರಾಣಿ, ಶಿವಕುಮಾರ್ ಉದಾಸಿ, ರಾಜು ಗೌಡ ಮುಂತಾದವರು ಸಮಾವೇಶದಲ್ಲಿ […]

ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ: ರೈ

Saturday, November 11th, 2017
ramanath rai

ಮಂಗಳೂರು :ಮುಖ್ಯ ಮಂತ್ರಿ ಸಿದ್ಧರಾಮಯ್ಯ ವಿರುದ್ಧ ಯಡಿಯೂರಪ್ಪ ಅವರು ಸಡಿಲ ಭಾಷೆ ಬಳಸಿರುವುದು ಅರಣ್ಯ ಸಚಿವರ ಸಿಟ್ಟಿಗೆ ಕಾರಣ. ಬಿಜೆಪಿ ನಾಯಕ ಯಡಿಯೂರಪ್ಪ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕಿಡಿ ಕಾರಿದ್ದಾರೆ. ರಮಾನಾಥ ರೈ ‘ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ. ಮುಂಬರುವ ದಿನಗಳಲ್ಲಿ ಯಾರು ಮೂರ್ಖರು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಪ್ರಜ್ಞಾವಂತ ಜನರೇ ಉತ್ತರ […]

ಪುತ್ತೂರು: ಕಿಲ್ಲೆ ಮೈದಾನದಲ್ಲಿ ಪರಿವರ್ತನಾ ಯಾತ್ರೆ ಕಾರ್ಯಕ್ರಮ

Saturday, November 11th, 2017
parivarthana yathre

ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್‌‌‌ರನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟಬೇಕು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ, ಮರ್ಯಾದೆ ಇದ್ದರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದರು. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಂಜೆ ನಡೆದ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅತ್ಯಾಚಾರ ಪ್ರಕರಣದ ಆರೋಪಿ ವೇಣುಗೋಪಾಲ್ ಅವರನ್ನು ಲೋಕಸಭಾ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಮುಂದುವರಿಸುತ್ತೀರಾ ಎಂಬ ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ […]

ಮಂಗಳೂರಲ್ಲಿ ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ

Thursday, July 13th, 2017
Yedyurapp Airport

ಮಂಗಳೂರು:  ಸರ್ಕಾರ ಕರೆದಿರುವುದು ಯಾರ ಶಾಂತಿ ಸಭೆ? ಕಾಂಗ್ರೆಸ್‌ನವರ ಶಾಂತಿ ಸಭೆಯಾ? ಕೋಮು ಗಲಭೆಯನ್ನು ಹುಟ್ಟು ಹಾಕಿದವರ ನೇತೃತ್ವದಲ್ಲೇ ಸಭೆ ನಡೆಯುತ್ತಿದೆ. ಯಾರು ಬಲಿಯಾಗಿದ್ದಾರೋ ಆ ಸಂಘಟನೆಗೆ ಆಹ್ವಾನ ಇಲ್ಲ. ಹಿಂದೂ ಸಂಘಟನೆಗಳಿಗೆ ಯಾಕೆ ಆಹ್ವಾನ ನೀಡಿಲ್ಲ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಂತಿ ಸಭೆಗೆ ಹಾಜರಾಗುವ ಪ್ರಶ್ನೆಯೇ ಇಲ್ಲ, ಎಸ್‌ಡಿಪಿಐ ನಂತಹ ಸಂಘಟನೆಗೆ ಆಹ್ವಾನ ನೀಡಲಾಗಿದೆ. ಇದು ಕೇವಲ ರಮಾನಾಥ ರೈ ಬೆಂಬಲಿಗರು, ಕಾಂಗ್ರೆಸ್ ಸಭೆಯಾ? ಅದಕ್ಕೆ […]

ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು : ಯಡಿಯೂರಪ್ಪ

Friday, June 23rd, 2017
Yedurappa

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದಿಂದ ರಾಜ್ಯಕ್ಕೆ ಒಂದು ಲಕ್ಷದ 13ಸಾವಿರ ಕೋಟಿ ಅನುದಾನ ಬಂದಿದೆ. ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ಕೋಟಿ ಸಾಲ ಮಾಡಿದೆ. ಇಷ್ಟಿದ್ದರೂ ಕೂಡ ರೈತರ 50 ಸಾವಿರ ಮಾತ್ರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು. ಆದರೂ ಬಿಜೆಪಿ ಮಾಡಿದ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದರು. […]

ಕರಾವಳಿ ಜನರ ಸಾಂಸ್ಕೃತಿಕ ಕ್ರೀಡೆ ಕಂಬಳವನ್ನು ನಿಷೇಧಿಸ ಬಾರದು : ಯಡಿಯೂರಪ್ಪ

Tuesday, January 24th, 2017
yeddyurappa

ಮಂಗಳೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ  ಕಂಬಳವನ್ನು ನಿಷೇಧಿಸ ಬಾರದು, ಕರಾವಳಿ ಜನರ ಸಾಂಸ್ಕೃತಿಕ ಕ್ರೀಡೆಯಾಗಿರುವ ಕಂಬಳಕ್ಕೆ ಇತಿಹಾಸವಿದೆ. ಈ ಬಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬರ ಅಧ್ಯಯಕ್ಕೆ ಆಗಮಿಸಿರುವ ಅವರು  ಬಿಜೆಪಿ ಕಚೇರಿಯಲ್ಲಿ  ಮಾತನಾಡಿದರು. ಕಂಬಳ ಕುರಿತು ಹೈಕೋರ್ಟ್‌ ತೀರ್ಪು ಸಹ ಜನರ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಮತ್ತು ಹೋರಾಟಕ್ಕೆ ಎಡೆ ಮಾಡಿಕೊಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. ಇನ್ನು ಎಂಆರ್‌ಪಿಎಲ್‌ […]