ಕರ್ನಾಟಕದಲ್ಲಿ ಒಂದೇ ದಿನ 216 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ
Saturday, May 23rd, 2020ಬೆಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಗೆ ಒಂದೇ ದಿನ 216 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ಇಂದು ಮಧ್ಯಾಹ್ನದ ವರದಿಯಲ್ಲಿ 196 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದರೆ ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ವರದಿಯಲ್ಲಿ ಮತ್ತೆ 20 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಇಂದು ಒಂದೇ ದಿನ 216 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. […]