ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬದ ದಿನ ಪೊಕೋಡಾ ತಯಾರಿಸಿ ಮಾರಾಟ ಮಾಡಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

Friday, September 17th, 2021
Youth Congress

ಮಂಗಳೂರು  :   ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ವತಿಯಿಂದ  ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬವನ್ನು ಪೊಕೋಡಾ ತಯಾರಿಸಿ ಮಾರಾಟ ಮಾಡಿ ಪ್ರತಿಭಟಿಸಿಸುವ ಮೂಲಕ ಆಚರಿಸಿದರು. ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ. ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಮತ್ತು ಬೆಲೆಯೇರಿಕೆಯಾಗಿದೆ  ಎಂದು ಅವರು ಧಿಕ್ಕಾರ ಘೋಷಣೆ ಕೂಗಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, […]

ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ಬಳಸಿದ್ದ ಬೈಕ್, ಬೇಕಲ ಪೊಲೀಸ್ ಠಾಣೆಯಿಂದ ಕಾಣೆ

Tuesday, August 10th, 2021
congress-workers

ಕಾಸರಗೋಡು : ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ. ಎಂಟನೇ ಆರೋಪಿ ಪನಯಾಲ್‌‌ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ ಫಾರೆನ್ಸಿಕ್ ತಪಾಸಣೆಯನ್ನು ಸಿಬಿಐ ನಡೆಸುತ್ತಿದ್ದಂತೆ ಇದೀಗ ಪೊಲೀಸ್ ಠಾಣೆಯಿಂದ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 2019ರ ಫೆಬ್ರವರಿ 17 ರಂದು […]

ಕೋವಿಡ್ ಸೂಪರ್ ವಾರಿಯರ್; ಮೆರಿಲ್ ರೇಗೋ

Tuesday, June 15th, 2021
Meril-Rego

ಮಂಗಳೂರು  : ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ‌ ನೇತೃತ್ವದಲ್ಲಿ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾದವರಿಗೆ ಸಹಾಯ ಹಾಗೂ ಕೋವಿಡ್ ರೋಗಿಗಳಿಗೆ ನೆರವು ನಿರಂತರವಾಗಿ ನೀಡಲಾಗುತ್ತಿದೆ‌. ಲಾಕ್‌ಡೌನ್ ಆರಂಭದಲ್ಲಿ ಪ್ರಾರಂಭಿಸಿದ ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಾಶ್ರಿತರಿಗೆ ಹಾಗೂ ಸರಕು ಸಾಗಾಣಿಕೆಯ ವಾಹನ ಚಾಲಕರಿಗೆ ಮಧ್ಯಾಹ್ನದ ಊಟ ವಿತರಿಸುವ ಕಾರ್ಯ ಪ್ರತಿದಿನ ನಿರಂತರವಾಗಿ ನಡೆಯುತ್ತಿದೆ. ದಿನಂಪ್ರತಿ 400-500ರಷ್ಟು ಜನರಿಗೆ ಊಟವನ್ನು ವಿತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ. ಇತ್ತೀಚೆಗೆ ಮಾಜಿ ಪ್ರಧಾನಿ […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Monday, June 7th, 2021
Youth Congress

ಮಂಗಳೂರು : ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ  ಸೋಮವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಲಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು. ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. […]

ಪೆಟ್ರೋಲ್ ಬೆಲೆ ಶತಕದ ಗಡಿ : ತೈಲೋತ್ಪನ್ನಗಳ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

Sunday, June 6th, 2021
congress protest

ಬೆಂಗಳೂರು : ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ, ಆದಾಯ ಕಳೆದುಕೊಂಡು ತೀವ್ರ ತೊಂದರೆಯಲ್ಲಿರುವಾಗ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಸಾಮಾನ್ಯ ಜನತೆಯ ಮೇಲೆ ಭಾರೀ ಹೊರೆ ಹೇರುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ದರ ನಗರದಲ್ಲಿ ನೂರು ರೂ ಗಡಿ ಸಮೀಪಿಸುತ್ತಿದ್ದು, ಡೀಸೆಲ್ ದರ 90 ರೂ ದಾಟಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ದರ ಹೆಚ್ಚಾಗುತ್ತಿದ್ದು, ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ […]

ಎಂಆರ್ ಪಿಎಲ್ ಉದ್ಯೋಗ ನೇಮಕಾತಿಯಲ್ಲಿ ತುಳುವರಿಗೆ ಅನ್ಯಾಯ, ಮನೆಮನೆ ಯಲ್ಲಿ ಪ್ರತಿಭಟನೆ

Saturday, June 5th, 2021
mrpl

ಮಂಗಳೂರು : ಎಂಆರ್ ಪಿಎಲ್ ಉದ್ಯೋಗ ನೇಮಕಾತಿಯಲ್ಲಿತುಳುವರಿಗೆ ಅನ್ಯಾಯ ಆಗಿದೆ ಎಂದು ಸಮಾನ ಮನಸ್ಕ ಸಂಘಟನೆಗಳು “ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕುಲೆಗ್ ಮಲ್ಲಪಾಲ್” ಎಂಬ ವಿಷಯಗಳನ್ನು ಮುಂದಿಟ್ಟು ಮನೆ ಮನೆ ಪ್ರತಿಭಟನೆ ಗೆ ಕರೆ ನೀಡಿದ್ದವು. ಈ ಕರೆಗೆ ಅವಳಿ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲಸಿಕ್ಕಿದೆ. ಡಿವೈಎಫ್‍ಐ ನೇತೃತ್ವದ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಯುವ ಕಾಂಗ್ರೆಸ್, ಯುವ ಜನತಾ ದಳ, ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳು, ಕಾರ್ಮಿಕ, ಮಹಿಳಾ ಸಂಘಟನೆಗಳು ಮಾತ್ರ ವಲ್ಲದೆ ಜಿಲ್ಲೆಯ ವಿವಿಧ ಯುವಕ […]

ಬಿಜೆಪಿ ಯುವ ಮೋರ್ಚಾ ನೀಡಿರುವ ದೂರು ರಾಜಕೀಯ ಪ್ರೇರಿತ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Wednesday, May 19th, 2021
dk-Shivakumar

ಬೆಂಗಳೂರು : ಗೃಹ ಆರೈಕೆಯಲ್ಲಿರುವ ಕೋವಿಡ್ ಸೋಂಕಿತರಿಗೆ ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ನೀಡಿರುವ ದೂರು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಯುವ ಮೋರ್ಚಾದ ಬೆಂಗಳೂರು ಕೇಂದ್ರ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ವಿಜಯೇಂದ್ರ ಎಂಬುವರು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ […]

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಪಂಜಿನಮೆರವಣಿಗೆ

Wednesday, November 18th, 2020
Torch Light protest

ಮಂಗಳೂರು  :  ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಬುಧವಾರ ಸಂಜೆ  ಪಂಜಿನಮೆರವಣಿಗೆ ನಡೆಸಲಾಯಿತು. ದ.ಕ. ಜಿಲ್ಲೆಯ ಮಾಜಿ ಸಚಿವ ರಮಾನಾಥ ರೈ ಪಂಜಿನ ಮೆರವಣಿಗೆಗೆ ಕದ್ರಿ ಪಾರ್ಕ್ ಬಳಿ ಚಾಲನೆ ನೀಡಿದರು. ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರೆಯಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು‌‌ […]

ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್​ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು

Saturday, October 10th, 2020
Mithun-Rai

ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ […]

ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ, ಅತ್ಯಾಚಾರ ಯುವ ಕಾಂಗ್ರೆಸ್ ಪ್ರತಿಭಟನೆ

Friday, October 2nd, 2020
congress Protest

ಮಂಗಳೂರು : ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ , ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಮತ್ತು ಕೇಂದ್ರ ಸರಕಾರವನ್ನು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಎದುರು ಗುರುವಾರ ಮೊಂಬತ್ತಿ ಪ್ರತಿಭಟನೆ, ಪ್ರತಿಕ್ರತಿ ದಹನ ನಡೆಯಿತು. ಪೊಲೀಸರು ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಸುಟ್ಟು ಹಾಕಿದ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿ ಠಾಕೂರು ಸಮುದಾಯಕ್ಕೆ ಸೇರಿದ ನಾಲ್ವರು ಕೊಲೆಗಡುಕರಿಗೆ ಶೀಘ್ರ ಮರಣ ದಂಡನೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ […]