Blog Archive

ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ದೊಂದಿ ಬೆಳಕಿನ ಪ್ರತಿಭಟನೆ

Friday, September 25th, 2020
YouthCongress

ಮಂಗಳೂರು : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಲ್ಲಿ ದೊಂದಿ ಬೆಳಕಿನ ಪ್ರತಿಭಟನೆ ಶುಕ್ರವಾರ ಸಂಜೆ  ನಡೆಯಿತು. ಪ್ರತಿಭಟನೆಗೆ ಅನುಮತಿವಿಲ್ಲದ ಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಂತರ ಬಂಧಿತರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಗೆ ಕೋವಿಡ್ ಸೋಂಕು ದೃಢ

Friday, July 17th, 2020
MithunRai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್-19 ಸೋಂಕು ತಾಗಿರುವುದು ದೃಢ ವಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ‘ಕಿಟ್’ ವಿತರಣೆ

Wednesday, April 1st, 2020
Mithun-Rai

ಮಂಗಳೂರು : ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರುವ ಜನತೆಯ ದೈನಂದಿನ ಜೀವನ ನಿರ್ವಹಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಪಿಲಿನಳಿಕೆ ಪ್ರತಿಷ್ಠಾನದ ಗೌರವ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ಜಿಲ್ಲೆಯ 1 ಸಾವಿರ ಬಡ ಕುಟುಂಬಗಳಿಗೆ ನೆರವಾಗುವಂತೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಕಿಟ್’ಅನ್ನು ಮೊದಲ ಹಂತದಲ್ಲಿ ಎ.2ರಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇಂಟಕ್ ಅಧ್ಯಕ್ಷನ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತು ಅವರ ಬೆಂಬಲಿಗರಿಂದ ಹಲ್ಲೆ

Thursday, August 9th, 2018
Congress-fight

ಮಂಗಳೂರು : ಕಾಂಗ್ರೆಸ್ ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿ ಮೇಲೆ ನಗರದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ‘ಕ್ವಿಟ್ ಇಂಡಿಯಾ’ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ  ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ  ಚೈನ್ ಕಿತ್ತುಕೊಂ ಡ ಘಟನೆ ನಗರದ ಪುರಭವನದಲ್ಲಿ ಗುರುವಾರ ನಡೆದಿದೆ. ಪುರಭವನದಲ್ಲಿ ನಡೆದ ಕ್ವಿಟ್ ಇಂಡಿಯಾ ಎಂಬ ಕಾರ್ಯಕ್ರಮದ ಅಂತ್ಯದಲ್ಲಿ ಕಾಂಗ್ರೆಸ್ ನಾಯಕರ ಮುಂದೆಯೇ ಹಲ್ಲೆ ನಡೆಸಲಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ಪುನೀತ್ ಶೆಟ್ಟಿ ಮೇಲೆ ಮಿಥುನ್ ರೈ ಮತ್ತು ಆತನ ಬೆಂಬಲಿಗರು ಏಕಾಏಕಿ ದಾಳಿ ನಡೆಸಿದ್ದಾರೆ. ಸುಮಾರು […]

ಮಿಥುನ್ ರೈಗೆ ಟಿಕೆಟ್ ನಿರಾಕರಣೆ, ಯುವ ಕಾಂಗ್ರೆಸ್ ಮುಖಂಡರಿಂದ ಬಂಡಾಯ

Tuesday, April 17th, 2018
mithun-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರ ಕೋಟೆಯಂತಿದ್ದ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಬಂಡಾಯ ಸ್ಪೋಟಗೊಂಡಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಶಾಸಕ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಯುವ ಕಾಂಗ್ರೆಸ್ ಮುಖಂಡರು ತಿರುಗಿ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೈ ಪಾಳಯದಲ್ಲಿ ಭಿನ್ನಮತ ಆರಂಭವಾಗಿದೆ‌. ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಘಟಕ ಸಿಡಿದೆದ್ದಿದೆ. ದಕ್ಷಿಣ ಕನ್ನಡ […]

ಇಂಧನ ಸಚಿವರ ಆದಾಯ ತೆರಿಗೆ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Wednesday, August 2nd, 2017
youth congress

ಮಂಗಳೂರು  : ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎ. ಸಿ. ವಿನಯರಾಜ್ ನೇತೃತ್ವದಲ್ಲಿ ಮಂಗಳೂರು ಆದಾಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಡಿಕೆಶಿ ಅವರ ಮೇಲೆ ದಾಳಿಗೆ ಬಿಜೆಪಿಯ ಪಿತೂರಿ ಎಂದು ಆರೋಪಿಸಿದ ಅವರು ಆದಾಯ ಕಚೇರಿಯ ಕಿಟಕಿ ಗಾಜುಗಳನ್ನು ಪುಡಿ-ಪುಡಿ ಮಾಡಿದರು. ಬಳಿಕ ಕಚೇರಿ ಒಳಕ್ಕೆ ನುಗ್ಗಲು ಯತ್ನಿಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಮಂಗಳೂರು ದಕ್ಷಿಣ ಪೊಲೀಸರು ತಡೆದು ಹೊರಕ್ಕೆ ಕಳುಹಿಸಿದರು. ನಂತರ ಅಲ್ಲಿಂದ ತೆರಳಿದ ಪ್ರತಿಭಟನಾಕಾರರು, […]

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]

ಅನೈತಿಕ ಪೊಲೀಸ್‌ಗಿರಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ

Tuesday, September 29th, 2015
Youth Congress padayatre

ಮಂಗಳೂರು : ನಗರದ ಲಾಲ್ ಭಾಗ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿ ವಿರುದ್ಧ ಆಯೋಜಿಸಿರುವ ಬೃಹತ್ ಪಾದಯಾತ್ರೆಯನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು. ಕೋಮು ಪ್ರಚೋದನೆ ಮತ್ತು ಕೋಮುವಾದವನ್ನು ಬುಡಸಹಿತ ಕಿತ್ತು ಹಾಕಲು ಸಂಕಲ್ಪ ಮಾಡುವಂತೆ ಯುವಕರಿಗೆ ಕರೆ ನೀಡಿದರು. ಜಿಲ್ಲೆ ಶಾಂತಿ ಹಾಗು ಸೌಹಾರ್ಧತೆಯ ನೆಲೆಯಲ್ಲಿ ಹಿಂದೂ ಮುಸ್ಲೀಮರನ್ನು ಒಗ್ಗೂಡುವಂತೆ ಮಾಡಿದೆ. ಅದನ್ನು […]

ಕಾಂಗ್ರೆಸ್ ವತಿಯಿಂದ ಫೆ.3ರಂದು ಬೃಹತ್ ಯುವ ಜಾಗೃತಿ ಸಮಾವೇಶ

Friday, January 28th, 2011
ಬೃಹತ್ ಯುವ ಜಾಗೃತಿ ಸಮಾವೇಶ

ಮಂಗಳೂರು; ದೇಶಾದ್ಯಂತ ಯುವ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳನ್ನು ಪ್ರಜಾತಂತ್ರ ವ್ಯವಸ್ಥೆಯ ಮೂಲಕ ಆರಿಸಿ ಪಕ್ಷವನ್ನು ಬಲಿಷ್ಠಗೊಳಿಸುವ ಹಾಗೂ ಪಾರದರ್ಶಕ ವ್ಯವಸ್ಥೆ ಸ್ಥಾಪಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆಯನ್ನು ಶ್ರೀಯುತ ರಾಹುಲ್ ಗಾಂಧಿಯವರು ಚಾಲನೆ ನೀಡಿದ್ದು ಈ ಪ್ರಕ್ರಿಯೆಯನ್ನು ಈಗಾಗಲೇ ಸುಮಾರು 16 ರಾಜ್ಯಗಳಲ್ಲಿ ಪೂರ್ಣಗೊಳಿಸಲಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ಯುವ ಕಾಂಗ್ರೆಸ್ ಸಮಿತಿಗೆ   ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾದ ಪ್ರಯುಕ್ತ ಮೊದಲನೆಯದಾಗಿ ಯುವ ಜನರನ್ನು ಯುವ ಕಾಂಗ್ರೆಸ್ಗೆ ಸದಸ್ಯರನ್ನಾಗಿ ನೋಂದಾಯಿಸುವ ಪ್ರಕ್ರಿಯೆ ಕರ್ನಾಟಕ ರಾಜ್ಯದ ದ.ಕ. ಜಿಲ್ಲೆಯ […]