ಬಜೆಟ್ನಲ್ಲಿ ಕೊರೋನಾದ ಹೆಸರಲ್ಲಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ : ಯು.ಟಿ. ಖಾದರ್

Wednesday, February 10th, 2021
ut-khader

ಮಂಗಳೂರು : ಕೇಂದ್ರ ಸರಕಾರ ಮಂಡನೆ ಮಾಡಿರುವ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆಗಳಿಲ್ಲ. ಪ್ರಕೃತಿ ವಿಕೋಪಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಸೇಲ್ ಇಂಡಿಯಾ, ಲೂಟ್ ಇಂಡಿಯಾ ಬಜೆಟ್ ಅನ್ನು ಕೇಂದ್ರ ಸರಕಾರ ಮಂಡಿಸಿದೆ.  ಕೊರೋನಾದ ಹೆಸರಲ್ಲಿ ಜನರಿಗೆ ತೆರಿಗೆ ಹಾಕಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಜೆಟ್ ನಲ್ಲಿ ಕರ್ನಾಟಕಕ್ಕೆ […]

ಶಾಸಕ ಯು.ಟಿ ಖಾದರ್‌ ಅವರ ಕಾರನ್ನು ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯ ಬಂಧನ

Thursday, December 24th, 2020
utKhader

ಮಂಗಳೂರು : ಮಾಜಿ ಸಚಿವ ಯು.ಟಿ ಖಾದರ್‌ ಅವರ ಕಾರನ್ನು ಬುಧವಾರ ರಾತ್ರಿ  ಬೈಕ್‌ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ಮಂಗಳೂರಿನ ದೇರಳಕಟ್ಟೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಭದ್ರತಾ ವಾಹನದ ಬೆಂಗಾವಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಸುಮಾರು 15 ಕಿ.ಮೀ ಖಾದರ್‌ ಅವರ ವಾಹನವನ್ನು ಫಾಲೋ ಮಾಡಿದ್ದ ಎನ್ನಲಾಗಿದ್ದು,  ಭದ್ರತಾ […]

ಗೋಡೆ ಬರಹ ಬರೆದ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಬೇರೆ ದೇಶಕ್ಕೆ ಬಿಟ್ಟು ಬರಬೇಕು : ಯು.ಟಿ. ಖಾದರ್

Sunday, November 29th, 2020
UT Khader

ಮಂಗಳೂರು: ಉಗ್ರರಿಗೆ ಬೆಂಬಲವಾಗಿ ಗೋಡೆ ಮೇಲೆ ಬರೆದ ಆರೋಪಿಗಳು  ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು 15 ದಿನದೊಳಗೆ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಜಿ‌ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉಗ್ರರ ಪರ ಗೋಡೆ ಬರಹ ಬರೆಯುವವರ ಹಿಂದೆ ಯಾರಿದ್ದಾರೆ ಎಂದು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕಾದದ್ದು ಬಿಜೆಪಿ ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ರೀತಿ ಬರೆದವರು ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಅವರನ್ನು […]

ಕಡಲ್ಕೊರೆತಕ್ಕೆ ಉಳ್ಳಾಲ ಉಚ್ಚಿಲದಲ್ಲಿ ಕೊಚ್ಚಿ ಹೋದ ಸಂಪರ್ಕ ರಸ್ತೆ : ಯು.ಟಿ. ಖಾದರ್ ಭೇಟಿ

Monday, August 10th, 2020
utk

ಉಳ್ಳಾಲ: ತೀವ್ರ ಕಡಲ್ಕೊರೆತದ ಪರಿಣಾಮ  ಉಚ್ಚಿಲ ಭಾಗದಲ್ಲಿ ಸಂಪರ್ಕ ರಸ್ತೆ ಕೊಚ್ಚಿ ಹೋಗಿದೆ. ಇದಕ್ಕೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಳ್ಳಾಲದ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಹಾಗೂ ಇನ್ನಿತರ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯು.ಟಿ.ಖಾದರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಕಡಲು ಕೊರೆತದಿಂದ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಪ್ರಾಣಿ, ಪಕ್ಷಿಗಳ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೆವು. ಎರಡು ತಿಂಗಳಿಂದ ಸಮಸ್ಯೆಗಳ […]

ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ಯಾಕೆ ? ಯು.ಟಿ. ಖಾದರ್ ಪ್ರಶ್ನೆ

Wednesday, July 29th, 2020
UTKhader

ಮಂಗಳೂರು : ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ಆಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಆರೋಪ ವೆತ್ತಿದ್ದಾರೆ. ದನ  ಸಾಗಾಟಗಾರರ ಮೇಲೆ ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. […]

ಒಳಚರಂಡಿ ಇಲ್ಲದ ಊರು ಅದು ಅಘೋಷಿತ ಸ್ಲಂ : ಯು.ಟಿ. ಖಾದರ್

Friday, February 28th, 2020
ullal

ಮಂಗಳೂರು : ಒಂದು ಊರು ಅಭಿವೃದ್ಧಿಯಾಗಬೇಕಾದರೆ ಜನಸಾಮಾನ್ಯರು ಸರಕಾರದೊಂದಿಗೆ ಕೈಜೋಡಿಸಿದರೆ ಮಾತ್ರ ಸಾಧ್ಯ. ಉಳ್ಳಾಲದ ಕೆಲವು ಸ್ಥಳಗಳಲ್ಲಿ ಚರಂಡಿಗಳಲ್ಲಿ ಕಸವು ತುಂಬಿಕೊಂಡಿದೆ. ಅದನ್ನು ಶುಚಿಗೊಳಿಸಬಹುದು. ಆದರೆ ಕೆಲವು ದಿನಗಳಲ್ಲಿ ಮತ್ತೆ ಅದೇ ಪರಿಸ್ಥಿತಿ ಬರುತ್ತದೆ. ಇದೆಲ್ಲ ಕಡಿಮೆ ಆಗಬೇಕಾದರೆ ಉಳ್ಳಾಲದಲ್ಲಿ ಒಳ ಚರಂಡಿ ಬರದೆ ಯಾವುದೂ ಸಾಧ್ಯವಾಗುವುದಿಲ್ಲ. ಯಾವ ಊರಿನಲ್ಲಿ ಒಳಚರಂಡಿ ಇಲ್ಲ ಅದು ಸ್ಲಂ ಆಗುತ್ತದೆ ಎಂದು ಮಾಜಿ ಸಚಿವರು ಮತ್ತು ಶಾಸಕರಾಗಿರುವ ಯು.ಟಿ. ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ನೆಹರು ಯುವ ಕೇಂದ್ರ ಮಂಗಳೂರು, ಉಳ್ಳಾಲ […]

ಮಂಗಳೂರು : ಸರೆಂಡರ್ ಪಾಲಿಟಿಕ್ಸ್ ಮಾಡಬಾರದು; ಯು.ಟಿ. ಖಾದರ್

Thursday, December 5th, 2019
UT-Khader

ಮಂಗಳೂರು : ಮೇರೆಮಜಲು ಗ್ರಾ.ಪಂನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಹಾಗೂ ಇರಾ ಗ್ರಾ.ಪಂ. ಅಧ್ಯಕ್ಷ ರಝಾಕ್ ಕುಕ್ಕಾಜೆ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಶಾಸಕ ಪೊಲೀಸರು ಇಂತಹ ಪ್ರಕರಣಗಳಲ್ಲಿ ಸರೆಂಡರ್ ಪಾಲಿಟಿಕ್ಸ್ ಮಾಡಬಾರದು ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಸರ್ಕ್ಯೂಟ್‌ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಲ್ಲೆ ಮಾಡಿದವರು ಹಾಗೂ ಅದರ ಹಿಂದಿರುವವರ ಬಗ್ಗೆ ಕೂಲಂಕುಷ ತನಿಖೆ ಮಾಡಿ ಇಂತಹ ಪ್ರಕರಣ ಮರುಕಳಿಸದಂತೆ ನಿಗಾ ವಹಿಸುವ […]

ಪಡಿತರ ಚೀಟಿ ಗೊಂದಲ, ಅನರ್ಹ ಪಡಿತರದಾರರಿಗೆ ದಂಡ ವಸೂಲಾತಿ ಕ್ರಮದ ಬಗ್ಗೆ ಚರ್ಚೆ

Thursday, November 7th, 2019
UT-Kader

ಬಂಟ್ವಾಳ : ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪಡಿತರ ಚೀಟಿ ಗೊಂದಲ, ಅನರ್ಹ ಪಡಿತರದಾರರಿಗೆ ದಂಡ ವಸೂಲಾತಿ ಕ್ರಮದ ಬಗ್ಗೆ ಚರ್ಚೆ ನಡೆಯಿತು. ಶಾಸಕ ಯು.ಟಿ. ಖಾದರ್ ಪ್ರಸ್ತಾಪಿಸಿ, ಪಡಿತರ ಚೀಟಿಯ ಬಗ್ಗೆ ಜನರು ಗೊಂದಲಕ್ಕೀಡಾಗಿದ್ದಾರೆ. ಸಾಮಾನ್ಯ ಜನರಿಗೆ ತೊಂದರೆ ನೀಡುವಂತಹ ನಿರ್ಣಯ ಜಾರಿಗೊಳಿಸುವುದು ಸರಿಯಲ್ಲ. ಉಚಿತ ಅನ್ನಕ್ಕೆ ದಂಡ ವಸೂಲಿ ಮಾಡುತ್ತಿರುವ ಪ್ರಕ್ರಿಯೆ ಇದೇ ಮೊದಲು ಎಂದರು. ಕಳೆದ ಎರಡು ವರ್ಷದ ಹಿಂದೆ […]

ಮಂಗಳೂರು ಬಂದರು ಖಾಸಗೀಕರಣಕ್ಕೆ ವಿರೋಧವಿದೆ : ಯು.ಟಿ. ಖಾದರ್

Wednesday, October 9th, 2019
UT-Khader

ಮಂಗಳೂರು : ಕೇಂದ್ರ ಸರಕಾರವು ಮಂಗಳೂರು ಬಂದರನ್ನು ಖಾಸಗೀಕರಣ ಮಾಡಲು ಮುಂದಾಗಿರುವುದನ್ನು ತೀವ್ರವಾಗಿ ವಿರೋಧಿಸುವಾಗಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಬುಧವಾರದಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎನ್‌ಎಂಪಿಟಿಯಲ್ಲಿ ಈಗಾಗಲೇ ಸುಮಾರು 40 ರಷ್ಟು ಶಿಪ್ಪಿಂಗ್ ಕಂಪೆನಿಗಳು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರಕಾರದ ಖಾಸಗೀಕರಣ ನೀತಿಯಿಂದಾಗಿ ಇಲ್ಲಿ ಕಾರ್ಯನಿರ್ವಹಿಸುವ ಸುಮಾರು ನಾಲ್ಕು ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ನಿಯೋಗವು ಕೇಂದ್ರ ಸಚಿವರನ್ನು ಬೇಟಿಯಾಗಿ ಇಲ್ಲಿ ಉದ್ಯೋಗ ಕಳೆದು ಕೊಳ್ಳುವವರಿಗೆ ಪ್ರಥಮ ಆದ್ಯತೆ ಅಡಿ […]

ಜಿಲ್ಲಾ ಮಟ್ಟದ 73ನೇ ಸ್ವಾತಂತ್ರ್ಯ ದಿನಾಚರಣೆ ರಂದು ನೆರೆ ಸಂತ್ರಸ್ತರಿಗೆ ಮಂಗಳೂರು ಡಿಸಿ ಶಶಿಕಾಂತ್‌ ಸೆಂಥಿಲ್‌ ಭರವಸೆ

Friday, August 16th, 2019
DC-sasikanth

ಮಂಗಳೂರು : “ದಕ್ಷಿಣ ಕನ್ನಡ ಜಿಲ್ಲೆ ಭಾರೀ ಪ್ರವಾಹವನ್ನು ಎದುರಿಸಿದೆ. ತಮ್ಮೆಲ್ಲವನ್ನೂ ಕಳೆದುಕೊಂಡು ಸಂಕಷ್ಟ ಪರಿಸ್ಥಿತಿಯಲ್ಲಿಯೂ ಸಂಯಮದಿಂದ ಸಹಕರಿಸಿರುವ ನಿಮ್ಮ ಜತೆ ಇಡೀ ಜಿಲ್ಲಾಡಳಿತವೇ ಇದೆ ಎಂಬ ಭರವಸೆಯನ್ನು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನಾನು ನೀಡುತ್ತಿದ್ದೇನೆ’ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 73ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ನೂರು ವರ್ಷಗಳಲ್ಲಿ ಕಂಡರಿಯದ ಪ್ರವಾಹ ಉಂಟಾಗಿದೆ. ಸಾರ್ವಜನಿಕ ಆಸ್ತಿ […]