ಯೋಗ ವಿಥ್ ಯೋಧ: ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

Friday, June 21st, 2024
Brijesh chowta

ಮಂಗಳೂರು : “ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು …ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರ ರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ […]

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

Monday, September 13th, 2021
Oscar fernandise

ಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಮನೆಯಲ್ಲಿ ಯೋಗ ಮಾಡುತ್ತಿರುವಾಗ ಕುಸಿದು ಬಿದ್ದು  ತಲೆಯ ಒಳಗೆ ರಕ್ತಸ್ರಾವವಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು. ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ […]

ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ಆರಂಭಿಸಿದ ವೈದ್ಯರು

Thursday, July 22nd, 2021
Oscar Fernandes

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದು, ಬುಧವಾರ ರಾತ್ರಿಯಿಂದಲೇ ಆರಂಭಿಸಲಾಗಿದೆ. ಸೋಮವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಈ ವೇಳೆ, ಯಾವುದೇ ಗಾಯಗಳಾಗದೇ ಇರುವುದರಿಂದ ಅದನ್ನು ನಿರ್ಲಕ್ಷ್ಯ ಮಾಡಿದ್ದರು. ಅದೇ ದಿನ ಅವರು ಡಯಾಲಿಸಿಸ್ ಚಿಕಿತ್ಸೆಗೆಂದು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ನರಕ್ಕೆ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡುಬಂದಿತ್ತು. ಮರುದಿನ ಅವರು […]

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ ಕಾರ್ಯಕ್ರಮ

Friday, February 3rd, 2017
yoga-training-centre

ಮಂಗಳೂರು: ಯೋಗದಿಂದ ಜನರು ನೆಮ್ಮದಿಯುತ ಆರೋಗ್ಯಕರ ಜೀವನವನ್ನು ಕಂಡುಕೊಳ್ಳಲು ಸಾಧ್ಯವಾಗಿದ್ದು, ಯೋಗದ ಮಹತ್ವವನ್ನು ಇಂದು ಇಡೀ ವಿಶ್ವವೇ ಅರಿತುಕೊಂಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಾನವಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠ ಆಶ್ರಯದಲ್ಲಿ ಸೌತ್ ಕೋರಿಯಾದ ವಾಂಕ್ವಾಂಗ್ ಡಿಜಿಟಲ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿವಿಯಲ್ಲಿ ಐದು ದಿನಗಳ ಕಾಲ ಆಯೋಜಿಸಿರುವ ‘ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]