ಯೋಗ ಉಸಿರಾಟದಷ್ಟೇ ಸಹಜವಾಗಿರಲಿ: ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ
Monday, June 21st, 2021ಮಂಗಳೂರು: ಯೋಗ ಉಸಿರಾಟದಷ್ಟೇ ಸಹಜ ಮತ್ತು ದೈನಂದಿನ ಪ್ರಕ್ರಿಯೆಯಾಗಬೇಕು. ವಿಶೇಷವಾಗಿ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ದೈಹಿಕ ಆರೋಗ್ಯ ಮತ್ತು ಅದಕ್ಕೆ ಪೂರಕವಾದ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸೂಕ್ತ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜು ಸೋಮವಾರ ಆನ್ಲೈನ್ ನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಮ್ಮ ಸ್ವಾಸ್ಥ್ಯಕ್ಕೆ ಅಗತ್ಯವಾದ ಶಾರೀರಿಕ ದಂಡನೆ, ಮಾನಸಿಕ- ಬೌದ್ಧಿಕ ಆರೋಗ್ಯ, ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ […]