ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ : ಮೋದಿ ಹಾದಿ ಅನುಸರಿಸಿದ ಸಂಸದರು

Saturday, November 2nd, 2024
Brijesh-with-yodha

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದು, ಸಂಜೆ ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಆ ಬಳಿಕ ಮಾತನಾಡಿದ […]