ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 02 ರಂದು ರಜೆ

Thursday, August 1st, 2024
school holiday

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಮಳೆ ಮುಂದುವರಿದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 02 ರಂದು ಎಲ್ಲಾ ಅಂಗನವಾಡಿ, ಸರಕಾರೀ ಹಾಗೂ ಅನುದಾನಿತ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಘೋಷಿಸಿದ್ದಾರೆ. ದುರ್ಭಲ ಶಿಥಿಲ ಕಟ್ಟಡಗಳಲ್ಲಿ ಪಾಠ ಪ್ರವಚನಗಳನ್ನು ಮಾಡದಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಸಮುದ್ರ ತೀರಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ 5ತಾಲೂಕುಗಳಲ್ಲಿ ಜುಲೈ 18 ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

Wednesday, July 17th, 2024
mullai-muhilan

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ಜುಲೈ 19 ರ ವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜುಲೈ 18 ಗುರುವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ,ಮೂಲ್ಕಿ ತಾಲೂಕುಗಳ ಶಾಲಾ‌ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ. […]

ಜುಲೈ 9 : ದಕ್ಷಿಣ ಕನ್ನಡ/ಉಡುಪಿ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

Monday, July 8th, 2024
school holiday

ಮಂಗಳೂರು : ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಭಾವ್ಯ ಹಾನಿಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ […]

ಜುಲೈ8 ರಂದು ಮಂಗಳೂರು ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

Monday, July 8th, 2024
Mullai-Muhilan-M-P

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ಮುನ್ನಚ್ಚರಿಕಾ ರಜೆ ಸಾರಲಾಗಿದೆ ಎಂದು ತಹಶೀಲ್ದಾರ್ ಹಾಗೂ ತಾಲೂಕು ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಭಾವ್ಯ ಹಾನಿಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 6ರಂದು ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

Saturday, July 6th, 2024
school-haoliday

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. […]

ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

Saturday, March 7th, 2020
suresh-kumar

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ದೆಹಲಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ರಜೆ ಕೊಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ. ಇದರ ಬೆನ್ನಲ್ಲೆ ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅಂತಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು ಪಿಯುಸಿ ಪರೀಕ್ಷಾ ಕೊಠಡಿಯಲ್ಲಿ […]