ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೇರವಾಗಿ ಬ್ಯಾಂಕ್ ಖಾತೆಗೆ ಬಿಡುಗಡೆ

Monday, August 31st, 2020
Raviraj Hegde

ಮಂಗಳೂರು  : ಕರ್ನಾಟಕ ಸರ್ಕಾರವು ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನದ ವಿವರಗಳನ್ನು DBT ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಿ ನೇರವಾಗಿ ಖಜಾನೆ-2 ದಿಂದ ಪಾವತಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದು, ಜೂನ್ 2020 ರ ಮಾಹೆಯ ರೂ. 5/- ಪ್ರೋತ್ಸಾಹಧನವನ್ನು ಸದಸ್ಯರುಗಳ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗಿರುತ್ತದೆ ಹಾಗೂ ಸರ್ಕಾರವು ನೀಡುತ್ತಿರುವ ಪ್ರೋತ್ಸಾಹಧನವನ್ನು ಹೈನುಗಾರರು ಪಡೆದುಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸಂಘಗಳಿಗೆ ನೀಡಲು ದ.ಕ. ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ. ರವಿರಾಜ್ ಹೆಗ್ಡೆಯವರು ತಮ್ಮ ಪ್ರಕಟಣೆಯಲ್ಲಿ ಕೋರಿರುತ್ತಾರೆ.

ಕೆ.ಎಮ್.ಎಫ್ ವತಿಯಿಂದ ಆಶಾ ಕಾರ್ಯಕರ್ತೆರಿಗೆ ಕಿಟ್ ವಿತರಣೆ

Monday, June 8th, 2020
kmf-kit-distribution

ಮಂಗಳೂರು : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಉತ್ಪನ್ನಗಳ ಕಿಟ್‍ಗಳನ್ನು ವಿತರಿಸಲಾಯಿತು. ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಿಟ್ ವಿತರಣೆ ಮಾಡಲಾಯಿತು. ಜಿಲ್ಲೆಯ 1,378 ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಿಟ್ ವಿತರಣೆ ಮಾಡಿದರು. ಜಿಲ್ಲೆಯಲ್ಲಿ […]