ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈಗ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಆಸ್ಪತ್ರೆ, ಆರೈಕೆ […]