ಬೆಂಗಳೂರು ನಗರ ಪೊಲೀಸರಿಂದ ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಜಾಗೃತಿ
Thursday, October 4th, 2018ಬೆಂಗಳೂರು: ನಗರ ಪೊಲೀಸರು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಜ್ಞಾನಭಾರತಿ ಠಾಣಾ ಪೊಲೀಸರು ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಕೆಲ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮುಂದುವರೆಸಿದ್ದಾರೆ. ಮಾದಕ ವಸ್ತುಗಳನ್ನು ಕಾಲೇಜಿಗೆ ತಂದರೆ ಹೇಗೆ ಅದನ್ನು ತಡೆಗಟ್ಟಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪಶ್ಚಿಮ ವಲಯ ಡಿಸಿಪಿ ರವಿ ಡಿ. ಚೆನ್ನಣ್ಣನವರ್ ಹಾಗೂ ಜ್ಞಾನಭಾರತಿ ಇನ್ಸ್ಪೆಕ್ಟರ್ ಗಿರಿರಾಜ್ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ.