ಕರಾವಳಿ ಕಾವಲು ಪೊಲೀಸ್ ಬಲವರ್ಧನೆಗೆ ಸರ್ಕಾರದ ಕ್ರಮ : ಬಸವರಾಜ ಬೊಮ್ಮಾಯಿ ಹೇಳಿಕೆ
Friday, October 25th, 2019ಬಂಟ್ವಾಳ : ಕರಾವಳಿ ಕಾವಲು ಪೊಲೀಸ್ ಪಡೆ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಭದ್ರತಾ ಪಡೆಗೆ ಅಗತ್ಯ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗೃಹಸಚಿವರು ಗುರುವಾರ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಸಿದರು. ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]