ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ : ಸಚಿವ ಡಿ ವಿ ಸದಾನಂದ ಗೌಡ

Monday, June 21st, 2021
DVS-Yoga

ಬೆಂಗಳೂರು : ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಚಿವರು ನಿಯಮಿತವಾಗಿ ಯೋಗ, ಪ್ರಾಣಾಯಾಮ ಮಾಡುವುದರಿಂದ ನಮ್ಮ […]

ನ್ಯಾನೋ ರಸಗೊಬ್ಬರದಿಂದ ಹೊಸ ಕೃಷಿ ಕ್ರಾಂತಿ : ಸದಾನಂದ ಗೌಡ

Sunday, May 30th, 2021
sadananda gowda

ಬೆಂಗಳೂರು: ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. (240 ರೂಪಾಯಿ ಬೆಲೆಯ 500 ಎಂಎಲ್ ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದ್ದು ಜೂನ್ 15ನೇ ತಾರೀಖಿನಂದು ಮುಕ್ತ ಮಾರುಕಟ್ಟೆಗೆ ಲಗ್ಗೆ ಇಡಲಿದೆ.) ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆಯವರು ಇಂದು ಏರ್ಪಡಿಸಿದ್ದ ವೆಬ್ಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು […]

ರಾಜ್ಯಕ್ಕೆ ಇಂದು ಮತ್ತೆ 5190 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ

Thursday, May 27th, 2021
DV sadanandagowda

ನವದೆಹಲಿ : ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ಕರ್ಣಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ನೀಡಿದ ಸಚಿವರು ರಾಜ್ಯಕ್ಕೆ ನಿನ್ನೆಯ ತನಕ ಅಂದರೆ 26 ಮೇ 2021ರವರೆಗೆ 5180 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಲಾಗಿತ್ತು. ಇಂದು ರಾಜ್ಯದ ಬೇಡಿಕೆಯನ್ನು ಪರಿಗಣಿಸಿ ಹೆಚ್ಚುವರಿಯಾಗಿ 5190 ವಯಲ್ಸ್ ನೀಡಲಾಗಿದೆ. ಇಲ್ಲಿಯ ತನಕ […]

ಕರ್ನಾಟಕಕ್ಕೆ ಈ ವಾರ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ : ಸದಾನಂದ ಗೌಡ

Monday, May 17th, 2021
DV Sadananda

ಬೆಂಗಳೂರು : ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ (ಸೀಸೆ) ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ ಈ ಸಲ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಒದಗಿಸಲಾಗಿದೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ಕರ್ನಾಟಕದಲ್ಲಿರುವ ಅತಿಹೆಚ್ಚು ಸಕ್ರೀಯ ಪ್ರಕರಣವನ್ನು ಆಧರಿಸಿ ರಾಜ್ಯಕ್ಕೆ ಈ […]

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ರಿಗೆ ಕೋವಿಡ್​ ಸೋಂಕು ದೃಢ

Thursday, November 19th, 2020
DV Sadananda Gowda

ಮಂಗಳೂರು  : ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅಧಿಕೃತವಾಗಿ ಟ್ವಿಟರ್ನಲ್ಲಿ ತಿಳಿಸಿರುವ ಸಚಿವರು, ಕೊರೋನಾ ಸೋಂಕಿನ ಪ್ರಾಥಮಿಕ ಲಕ್ಷಣಗಳ ಹಿನ್ನಲೆ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆ ಪ್ರತ್ಯೇಕ ವಾಸಕ್ಕೆ ಒಳಗಾಗಿತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಮುಂಜಾಗ್ರತೆ ವಹಿಸುವುದರೊಂದಿಗೆ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವರು ಕೊರೋನಾ ಸೋಂಕಿಗೆ ಒಳಗಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ […]