ರಾಕಿಂಗ್ ಸ್ಟಾರ್ ನಟ ಯಶ್ ಪತ್ನಿ ಮಕ್ಕಳ ಸಮೇತ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ
Tuesday, August 6th, 2024ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಮಂಗಳವಾರ ಭೇಟಿ ನೀಡಿದ್ದಾರೆ. ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಪತ್ನಿ ನಟಿ ರಾಧಿಕಾ, ಮಕ್ಕಳ ಜೊತೆ ಆಗಮಿಸಿದ ನಟ ಯಶ್ ದೇವರ ದರ್ಶನವನ್ನ ಪಡೆದಿದ್ದಾರೆ. ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ (ಆರೋಗ್ಯ ಸಮಸ್ಯೆಗೆ) ತೀರಿಸಿದ್ದಾರೆ. […]