ಡ್ರಗ್ ಜಿಹಾದ್ : ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ

Thursday, September 3rd, 2020
Drug Jihad

ದಾವಣಗೆರೆ: ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನೂ ಸಹ ವಿಚಾರಣೆಗೊಳಪಡಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ, ಪ್ರತಿಯೊಂದು ಮಾಹಿತಿ ಪೊಲೀಸರಿಗೆ ಗೊತ್ತು. ಆದರೆ ರಾಜಕಾರಣಿಗಳು ಅವರ ಕೈ ಕಟ್ಟಿಹಾಕಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ […]

ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ ನಿಧನ

Monday, January 27th, 2020
Amaranatha Shetty

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 […]

ಪೋಲಿಸ್ ಸಮವಸ್ತ್ರ ಕಳಚಿಟ್ಟು ರಾಜಕಾರಣಿಯಾಗಲು ಹೊರಟ ಮಂಗಳೂರಿನ ಮದನ್

Wednesday, January 10th, 2018
madan

ಮಂಗಳೂರು: ಯೂನಿಫಾಂ ಕಳಚಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ರಾಜಕೀಯ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮದನ್ ತಮ್ಮ ಪೊಲೀಸ್ ವೃತ್ತಿಗೆ ವಿದಾಯ ಹೇಳಿದ್ದಾರೆ. ಮಂಗಳೂರು ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮದನ್ ತಮ್ಮ ಪೋಲಿಸ್ ಡ್ಯೂಟಿ ಗೆ ಗುಡ್ ಬೈ ಹೇಳಿ ಸಕ್ರಿಯ ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಮೂಲತಃ ಕೊಡಗಿನವರಾದ ಮದನ್ ಮಂಗಳೂರಿನ ಕದ್ರಿ […]

ವ್ಯಂಗ್ಯಚಿತ್ರದಿಂದ ರಾಜಕಾರಣಿಗೆ ಎಚ್ಚರಿಕೆ : ನಳಿನ್

Friday, July 5th, 2013
Cartoonist

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಡೆದ ವ್ಯಂಗ್ಯ ಚಿತ್ರ ಪ್ರದರ್ಶನದ ಸಮಾರೋಪ ದಿನವಾದ ಶುಕ್ರವಾರ ಸಂಸದ ನಳಿನ್ಕುಮಾರ್ ಭೇಟಿ ನೀಡಿ ವ್ಯಂಗ್ಯಚಿತ್ರಗಳನ್ನು ವೀಕ್ಷಿಸಿದರು. `ವ್ಯಂಗ್ಯಚಿತ್ರಕಾರರು ತಮ್ಮ ರೇಖೆಗಳ ಮೂಲಕವೇ ರಾಜಕಾರಣಿಗಳಿಗೆ ಚಾಟಿ ಬೀಸುತ್ತಾರೆ. ಜನ ಪ್ರತಿನಿಧಿಗಳನ್ನು ಎಚ್ಚರಿಸುವ , ಸಮಾಜದ ಕೆಡುಕುಗಳನ್ನು ತಿದ್ದುವ ಕಾರ್ಯವೂ ವ್ಯಂಗ್ಯಚಿತ್ರಗಳಿಂದ ನಡೆಯುತ್ತಿದೆ. ಪ್ರದರ್ಶನ ಮೂಲಕ ಕರಾವಳಿಯ ಖ್ಯಾತ ಕಾರ್ಟೂನಿಸ್ಟ್ ಗಳ ವ್ಯಂಗ್ಯಚಿತ್ರಗಳನ್ನು ಒಂದೆಡೆ ವೀಕ್ಷಿಸಲು ಅವಕಾಶ ನೀಡಿರುವುದು ಶ್ಲಾಘನೀಯ ಎಂದು ಸಂಸದರು […]

ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

Monday, December 26th, 2011
ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು. 1991ರಿಂದ 92ರವರೆಗೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ “ನಾನು ಮತ್ತು ದೇವೇಗೌಡರು ರಾಜಕೀಯದಿಂದ ಯಾವತ್ತೂ ರಾಜಕೀಯದಿಂದ ನಿವೃತ್ತರಾಗುವುದಿಲ್ಲ” ಎಂದು ಬಂಗಾರಪ್ಪ ಸರಿಯಾಗಿ ಒಂದು ವರ್ಷದ […]