ವಿಧಾನ ಪರಿಷತ್ ಚುನಾವಣೆ : ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

Friday, September 20th, 2024
vidhana-parishath

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆ ಆಗಿರುವ ಎಲ್ಲಾ ನೀತಿ ಸಂಹಿತೆಗಳು ಈ ಚುನಾವಣೆಯಲ್ಲಿ […]

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ :ಮಾರ್ಚ್ 7ರಂದು ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Wednesday, March 6th, 2013
Local bodies election

ಮಂಗಳೂರು : ಮಾರ್ಚ್ 7ರಂದು ನಡೆಯುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಮತಪ್ರಚಾರದಲ್ಲಿ ತೊಡಗಿದ್ದು, ಅಂತಿಮವಾಗಿ ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದು ಕುತೂಹಲ ಹುಟ್ಟಿಸಿದೆ. ಈ ಚುನಾವಣೆಯು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾದ ಸೆಮಿಫೈನಲ್ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೋ […]