ಕಾಣದ ಕೈಗಳು ದೇಶಪ್ರೇಮದ ಹೆಸರಿನಲ್ಲಿ ಜಿಲ್ಲೆಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ: ಬಿ.ಕೆ. ಹರಿಪ್ರಸಾದ್
Tuesday, September 6th, 2016ಮಂಗಳೂರು: ಶಾಂತಿ, ಸೌಹಾರ್ದಕ್ಕೆ ಹೆಸರಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಣದ ಕೈಗಳು ದೇಶಪ್ರೇಮದ ಹೆಸರಿನಲ್ಲಿ ಜಿಲ್ಲೆಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ರವಿವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದ.ಕ. ಜಿಲ್ಲೆ ರಾಣಿ ಅಬಕ್ಕನಂತಹ ಸ್ವಾತಂತ್ರ್ಯ ಹೋರಾಟಗಾರರು ಹುಟ್ಟಿದ ನಾಡು. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರಿಗೆ ಉತ್ತಮ ಹೆಸರಿದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಕೋಮುದ್ವೇಷ ಹೆಚ್ಚಾಗುತ್ತಿದೆ. […]