ರಾಷ್ಟ್ರಪತಿಗಳಿಗೆ ರಾಮಾಯಣ ದರ್ಶನಂ ಮತ್ತು ಪರ್ವ ಕಾದಂಬರಿ ಕೊಡುಗೆ ನೀಡಿದ ಸಚಿವ ಸುನಿಲ್ ಕುಮಾರ್

Wednesday, October 6th, 2021
Ramayana Darshana

ಬೆಂಗಳೂರು : ಘನತೆವೆತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸುನಿಲ್ ಕುಮಾರ್ ಅವರು ಕುವೆಂಪು ಅವರ” ಶ್ರೀ ರಾಮಾಯಣ ದರ್ಶನಂ” ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,”ಪರ್ವ” ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.

ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Tuesday, August 24th, 2021
Vaccination

ಬೆಂಗಳೂರು : ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು […]

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ

Monday, July 26th, 2021
BS Yediyurappa

ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ […]

ಸಂಪುಟ ವಿಸ್ತರಣೆ : ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಹತ್ತು ಮಂದಿ ಶಾಸಕರು

Thursday, February 6th, 2020
Raj-Bhawan

ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನ ಭೋಧಿಸಿದರು. ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. […]

ಸಿದ್ದರಾಮಯ್ಯ ಸಚಿವ ಸಂಪುಟ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರಿಂದ ಪ್ರಮಾಣ ವಚನ ಸ್ವೀಕಾರ

Saturday, May 18th, 2013
Ministers

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಚನೆಯಾದ, 28 ಸಚಿವರನ್ನೊಳಗೊಂಡ ಸಚಿವ ಸಂಪುಟ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ ಹೀಗೆ ಎಲ್ಲಾ ಸಮುದಾಯಗಳಿಗೂ ಸಾಮಜಿಕ ನ್ಯಾಯವನ್ನು ಒದಗಿಸಿದ್ದಾರೆ.  ಬೆಳಗ್ಗೆ 10.30 ಕ್ಕೆ ಸರಿಯಾಗಿ ರಾಜ್ಯಪಾಲರ ರಾಜಭವನದ ಗಾಜಿನ ಮನೆಯಲ್ಲಿ ಹಲವು ಗಣ್ಯರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರವರು […]

26ನೇ ಮುಖ್ಯಮಂತ್ರಿಯಾಗಿ ಡಿ.ವಿ ಸದಾನಂದ ಗೌಡ ಪ್ರಮಾಣವಚನ

Thursday, August 4th, 2011
Sadananda Gowda sworn in/ ಸದಾನಂದ ಗೌಡ ಪ್ರಮಾಣ ವಚನ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಬಣದ ದೇವರಗುಂಡ ವೆಂಕಪ್ಪಗೌಡ ಸದಾನಂದ ಗೌಡ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸುಬ್ರಮಣ್ಯನಗರದ ತಮ್ಮ ನಿವಾಸದಿಂದ ರಾಜಭವನಕ್ಕೆ ಬೆಂಬಲಿಗರೊಂದಿಗೆ ಕ್ರೀಂ ಕಲರ್ ಪ್ಯಾಂಟ್, ಬಿಳಿ ಬಣ್ಣದ ಅಂಗಿ, ಬ್ಲ್ಯಾಕ್ ಕಲರ್ ಶೂ ಧರಿಸಿ ಆಗಮಿಸಿದರು. ನಂತರ ಬಿ.ಎಸ್.ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಪಕ್ಷದ ಹಿರಿಯ ಮುಖಂಡರು, ಆಪ್ತರಿಗೆ ಕೈಕುಲುಕುವ ಮೂಲಕ ಅಭಿನಂದನೆ ಸ್ವೀಕರಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ರಾಗ, ದ್ವೇಷ ಇಲ್ಲದೆ, […]

ವಿಶ್ವಾಸ ಮತ ಗೆದ್ದ ಯಡಿಯೂರಪ್ಪ ಸರಕಾರ, ಸದನದಲ್ಲಿ ಪ್ರತಿ ಪಕ್ಷಗಳ ಗದ್ದಲ

Monday, October 11th, 2010
ವಿಶ್ವಾಸಮತ ಗೆದ್ದ ಯಡಿಯೂರಪ್ಪ

ಬೆಂಗಳೂರು :  ಧ್ವನಿಮತದ ಮೂಲಕ ವಿಶ್ವಾಸಮತವನ್ನು ಅಂಗೀಕರಿಸಲಾಗಿದೆ ಎಂದು ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಸ್ಪೀಕರ್ ಕೆ ಜಿ ಬೋಪಯ್ಯ ಸದನದಲ್ಲಿ ಘೋಷಿಸುತ್ತಿದ್ದಂತೆ . ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆ ರಣರಂಗವಾಗಿ ಮಾರ್ಪಟ್ಟಿತು. ಬಳಿಕ ಸ್ಪೀಕರ್ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು ಸರಕಾರದ ಪರವಾಗಿ 106 ಮತಗಳು ಇರುವುದರಿಂದ ಬಿಜೆಪಿ ಸರ್ಕಾರಕ್ಕೆ ಬಹುಮತ ಸಾಬೀತಾಗಿದ್ದು, ವಿರುದ್ಧ ಶೂನ್ಯ ಮತಗಳು ಬಿದ್ದಿವೆ ಎಂದು ಬೋಪಯ್ಯ ಘೊಷಿಸಿದ್ದಾರೆ. ಇನ್ನು ಮುಂದಿನ ನಿರ್ಣಯ ರಾಜ್ಯಪಾಲರ ಕೈಯಲ್ಲಿದೆ ಅಲ್ಲೂ ಸಾಧ್ಯವಾಗದಿದ್ದರೆ ಪ್ರತಿ ಪಕ್ಷಗಳು ರಾಷ್ಟ್ರ […]