ಬಿಜೆಪಿಯ ಬೃಹತ್ ಹೋರಾಟದ ಫಲವಾಗಿ ಸಚಿವರ ರಾಜೀನಾಮೆ : ಶಾಸಕ ವೇದವ್ಯಾಸ ಕಾಮತ್
Thursday, June 6th, 2024ಮಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೇ ಎಲ್ಲವನ್ನೂ ಮುಚ್ಚಿ ಹಾಕುವ ಸರ್ಕಾರದ ಪ್ರಯತ್ನಕ್ಕೆ ವಿರುದ್ಧವಾಗಿ ಬಿಜೆಪಿ ರಾಜ್ಯಾದ್ಯಂತ ನಡೆಸಿದ ಬೃಹತ್ ಹೋರಾಟದ ಫಲವಾಗಿ ಸಚಿವರು ರಾಜೀನಾಮೆ ನೀಡುವಂತಾಗಿದ್ದು ಕಾಂಗ್ರೆಸ್ಸಿನ ಭ್ರಷ್ಟಾಚಾರದ ದಾಹಕ್ಕೆ ತಾತ್ಕಾಲಿಕ ಕಡಿವಾಣ ಬಿದ್ದಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ನಾಡಿನ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಡಲಾದ ಅನುದಾನವನ್ನು ಭ್ರಷ್ಟರು ತಿಂದು ತೇಗುತ್ತಿದ್ದರೂ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಪ್ರಸ್ತುತ ರಾಜ್ಯದಲ್ಲಿ ಸರ್ಕಾರಕ್ಕೆ ನಿರ್ದಿಷ್ಟ […]