ಮೂಲರಪಟ್ಣ ನೂತನ ಸೇತುವೆ ವಾಹನ ಸಂಚಾರಕ್ಕೆ ಮುಕ್ತ

Friday, November 12th, 2021
mularapatna

ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು […]

65 ಕೋಟಿ ಜನರಿಗೆ ಉಚಿತ ವ್ಯಾಕ್ಸಿನೇಷನ್‌ ನೀಡಿದ ಪ್ರಧಾನಿ ಮೋದಿಯವರ ಸಾಧನೆ ಜಗತ್ತಿನಲ್ಲಿ ಯಾರು ಮಾಡಿಲ್ಲ : ರಾಜೇಶ್ ನಾಯ್ಕ್

Monday, September 6th, 2021
Rajesh Naik

ಬಂಟ್ವಾಳ  : ಪಕ್ಷವನ್ನು ತಾಯಿ ಸ್ಥಾನದಲ್ಲಿರಿಸಿ ಸಂಘಟನೆಯನ್ನು ಮಾಡಿ ದೇಶಕ್ಕಾಗಿ ಹೋರಾಟ ನಡೆಸಿದ ಕಾರ್ಯಕರ್ತರ ಶ್ರಮದ ಫಲವಾಗಿ ಇಂದು ಭಾರತ ಸಶಕ್ತ ವಾಗಿದೆ, ಬಾಳ್ತಿಲ ಗ್ರಾಮದ ರೀತಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದರೆ ಪ್ರತಿ ಗ್ರಾಮವೂ ಬಾಳ್ತಿಲ ಗ್ರಾಮವಾಗುತ್ತದೆ, ಹಳ್ಳಿಯಿಂದ ದಿಲ್ಲಿವರೆಗೆ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರ ಪಡೆಯಬೇಕು,ಈ ನಿಟ್ಟಿನಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಿ, ಚುನಾವಣಾ ರೂಪುರೇಷೆಗಳನ್ನು ತಯಾರಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು […]

ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ : ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Saturday, September 4th, 2021
Rajesh Naik

ಬಂಟ್ವಾಳ  : ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಯನ್ನು ಸಹಿಸಲಾರದೆ ಅಪಪ್ರಚಾರದಲ್ಲಿ ತೊಡಗಿದೆ ,ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಗೋಳ್ತಮಜಲು ಗ್ರಾಮದಲ್ಲಿ ಒಟ್ಟು 6 ಬೂತ್ ಗಳ ಬಿಜೆಪಿ ಬೂತ್ ಅಧ್ಯಕ್ಷ ರ ಮನೆಯಲ್ಲಿ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದರು. ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೆ, ಸಮಯ ವ್ಯಯ ಮಾಡದೆ ಪಕ್ಷ ಸಂಘಟನೆ ಮಾಡಿ, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಗ್ರಾಮದ ಪ್ರತಿಮನೆಗೆ […]

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ‌ ಮಾಧ್ಯಮ‌ ವಿಭಾಗದ ವತಿಯಿಂದ ಮನ್ ಕೀ ಬಾತ್, ರಕ್ಷಾ ಬಂಧನ

Sunday, August 29th, 2021
Rajessh Naik

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಎನ್ನಲು ಹೆಮ್ಮೆ ಪಡುವ ಕಾಲ ಇದಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಪಕ್ಷವನ್ನು ಕಟ್ಟಿ ಬೆಳೆಸಿದವರ ತ್ಯಾಗ ಬಲಿದಾನದ ಶ್ರಮ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ‌ ಮಾಧ್ಯಮ‌ ವಿಭಾಗದ ವತಿಯಿಂದ ಮನ್ ಕೀ ಬಾತ್, ರಕ್ಷಾ ಬಂಧನ ಹಾಗೂ ಎಸ್.ಸಿ.ಕಾಲೋನಿ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆನಂದ ಪಿಲಿಚಂಡಿಗುಡ್ಡೆ ಯವರ ಮನೆಯಂಗಳದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಅವರು […]

ನಾರಾಯಣಗುರುಗಳನ್ನು ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ : ರಾಜೇಶ್ ನಾಯ್ಕ್

Monday, August 23rd, 2021
Narayana Guru

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ […]

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ

Tuesday, June 29th, 2021
Bantwal Tablet

ಬಂಟ್ವಾಳ : ವಿಧ್ಯಾಭ್ಯಾಸ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಹೊಸ ಸವಾಲುಗಳನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಜೀವನ ರೂಪಿಸಬೇಕು ಎಂದು ಟ್ಯಾಬ್ಲೆಟ್ ಪಿಸಿಗಳನ್ನು ಸರಕಾರ ಉಚಿತವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಮಂಗಳವಾರ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಹಾಗೂ ಕೋವಿಡ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರ ಜೀವನ ಹಾಗೂ ಜೀವನಕೋಸ್ಕರ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಸಿಕಾ […]

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಗೆ ಭೇಟಿ ನೀಡಿದ ಮಾಣಿಲ ಸ್ವಾಮೀಜಿ

Tuesday, January 12th, 2021
Rajesh Naik

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರನ್ನು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಕರ್ಮ ಯೋಗಿ ಶ್ರೀಶ್ರೀಶ್ರೀ ಮೋಹನದಾಸ ಸ್ವಾಮೀಜಿ ಅವರು ಶಾಸಕರ ಕಚೇರಿಯಲ್ಲಿ ಬೇಟಿ ಮಾಡಿದರು. ಶಾಸಕರ ಜೊತೆ ಕೆಲಹೊತ್ತು  ಸಮಾಜದ ಹಾಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳನ್ನು ಇನ್ನಷ್ಟು ಬೆಳೆಸುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಪೂರಕವಾಗಿ ಹೊಸ ಕಾರ್ಯಕ್ರಮ ಗಳನ್ನು ರೂಪಿಸುವಂತೆ ಮಾನವಿ ಮಾಡಿದರು.  ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ,  ಕಲಾವಿದ ಮಾಣಿಲ ಕ್ಷೇತ್ರದ ಟ್ರಸ್ಟಿಗಳಾದ ಮಂಜುವಿಟ್ಲ, […]

ಶೀಘ್ರವೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ : ಸಚಿವ ಡಾ. ನಾರಾಯಣ ಗೌಡ

Thursday, August 27th, 2020
Narayana Gowda

ಬಂಟ್ವಾಳ : ಪುರಸಭೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೀಡಿದ ಸಲಹೆಯನ್ನು ಗಮನದಲ್ಲಿರಿಸಲಾಗಿದೆ. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು ಗಮನ ಸೆಳೆದಿದ್ದು, ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಹೇಳಿದರು. ಬುಧವಾರ ಸಂಜೆ ಬಂಟ್ವಾಳಕ್ಕೆ ಭೇಟಿ ನೀಡಿದ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.  ಮುಂದೆ ಯಾರೂ ಕೂಡ ಸರ್ಕಾರದ ಮೀಸಲಾತಿಯನ್ನು ಪ್ರಶ್ನಿಸದಂತೆ ಮುಖ್ಯಮಂತ್ರಿ […]

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂಟ್ವಾಳ ಶಾಸಕರ ಉಸ್ತುವಾರಿಯಲ್ಲಿ ಸಿದ್ಧತಾ ಸಭೆ

Tuesday, June 2nd, 2020
Rajesh Naik

ಬಂಟ್ವಾಳ :  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಜೂನ್ 25 ರಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಬಂಟ್ವಾಳ ತಾಲೂಕಿನಲ್ಲಿ5, 200 ವಿದ್ಯಾರ್ಥಿಗಳು 12 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಶಾಸಕರು ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು […]

ಬಂಟ್ವಾಳಕ್ಕೆ ಆಗಮಿಸಿದ ಶ್ರೀನಿವಾಸ್ ಪೂಜಾರಿ

Thursday, August 22nd, 2019
shreenivas

ಬಂಟ್ವಾಳ : ಸಂಪುಟ ದರ್ಜೆಯ ಸಚಿವರಾಗಿ ಬಂಟ್ವಾಳಕ್ಕೆ ಮೊದಲ ಬಾರಿ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬುಧವಾರ ರಾತ್ರಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಬಿ. ದೇವದಾಸ್ ಶೆಟ್ಟಿ, ಎ.ಗೋವಿಂದ ಪ್ರಭು, ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.