ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಅಂಗನವಾಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Saturday, November 16th, 2024
Kudrebettu school

ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿಯ ಹಾಗೂ ಗ್ರಾಮದ […]

ಬಂಟ್ವಾಳದಲ್ಲಿ ಶೋಭಾ ಕರಂದ್ಲಾಜೆಯವರೊಂದಿಗೆ ರಕ್ಷಾಬಂಧನ

Sunday, August 22nd, 2021
Raksha Bandhana

ಬೆಂಗಳೂರು  : ಕೇಂದ್ರ ಕೃಷಿ ಮತ್ತ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು. ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ […]

ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ, ಪಕ್ಷದ ಹಿಂದೆ ಹೋಗಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Sunday, July 25th, 2021
Bantwal MLA

ಬಂಟ್ವಾಳ  : ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ ಪಕ್ಷದ ಹಿಂದೆ ಕಾರ್ಯಕರ್ತರು ಹೋದಾಗ ಪಕ್ಷ ಗಟ್ಟಿಯಾಗಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಬಲಿಷ್ಠ ಪಡಿಸುವ ದೃಷ್ಟಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಲಹೆ ಪಡೆದು ಕೆಲಸ ಮಾಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷವನ್ನು ಬಲಪಡಿಸಿದಾಗ ಮಾತ್ರ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ, ಅಮೂಲಕ […]

ಪೂಜೆಗಳನ್ನು ಸಾಮೂಹಿಕವಾಗಿ ಮಾಡಿದಾಗ ಅದರಿಂದ ಹೆಚ್ಚು ಫಲ ಪ್ರಾಪ್ತಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Friday, August 4th, 2017
Rajesh Naik

ಬಂಟ್ವಾಳ: ಮಾಣಿ ಕುಲಾಲ ಸಂಘದ ವತಿಯಿಂದ ಮಾಣಿ ಕುಲಾಲ ಭವನದಲ್ಲಿ ಸಾಮೂಹಿಕ ವರಮಹಾಲಕ್ಮೀ ಪೂಜೆ ಕಶೆಕೋಡಿ ಸೂರ್ಯ ನಾರಾಯಣ ಭಟ್ ಅವರ ನೇತೃವದಲ್ಲಿ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ‍್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಯಾವುದೇ ಪೂಜೆಗಳನ್ನು ಸಾಮೂಹಿಕವಾಗಿ ಮಾಡಿದಾಗ ಅದರಿಂದ ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ. ಸಾಮೂಹಿಕ ಪೂಜೆಗಳು ಸಮಾಜವನ್ನು ಒಟ್ಟುಗೂಡಿಸುತ್ತದೆ. ಸಂಘಟನಾತ್ಮಕವಾಗಿ ಯಾವುದೇ ಸಮುದಾಯ ಮುಂದೆ ಬಂದಾಗ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದು ಅವರು ಹೇಳಿದರು. ವೇದಿಕೆಯಲ್ಲಿ […]