ಸುರಕ್ಷಾ ಐಸಿಯು ಬಸ್‌ ಗೆ ಇಸಿಜಿ ಯಂತ್ರ : ರಾಜೇಶ್ ನಾಕ್ ಉಳಿಪ್ಪಾಡಿಗುತ್ತು

Monday, August 16th, 2021
ecg

ಬಂಟ್ವಾಳ: ಕೆಎಸ್‌ಆರ್‌ಟಿಸಿ ಸಾರಿಗೆ ಸಂಚಾರಿ ಸುರಕ್ಷಾ ಐಸಿಯು ಬಸ್‌ನಲ್ಲಿ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹೃದ್ರೋಗ ತಪಾಸಣೆಯ ಇಸಿಜಿ ಯಂತ್ರವನ್ನು ಅಳವಡಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಅವರು ಹೇಳಿದರು. ಗ್ರಾಮೀಣ ಜನರ ಉತ್ತಮ ಆರೋಗ್ಯ ರಕ್ಷಣೆಗಾಗಿ ಉತೃಷ್ಠವಾದ ಉಚಿತ ಸೇವೆ ನೀಡುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ವಿಶೇಷ ಮುತುವರ್ಜಿಯಿಂದ ಆರಂಬಿಸಲಾದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಚಾರಿ ಸುರಕ್ಷಾ ಐಸಿಯು ಬಸ್ ಸೋಮವಾರ ಬಂಟ್ವಾಳ ತಾ.ಸರಪಾಡಿ ಗ್ರಾ.ಪಂ. ಕಚೇರಿ ವಠಾರದಲ್ಲಿ ಗ್ರಾಮಸ್ಥರ […]

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕ ಲೋಕಾರ್ಪಣೆ

Tuesday, July 13th, 2021
Bantwal-Oxygen-plant

ಬಂಟ್ವಾಳ: ಸುಮಾರು 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕದಿಂದ ಬಂಟ್ವಾಳದ ಆಕ್ಸಿಜನ್ ಬೇಡಿಕೆಗಳ ಪೂರೈಕೆಯ ಜತೆಗೆ ಇತರ ಭಾಗಗಳಿಗೂ ಆಕ್ಸಿಜನ್ ಪೂರೈಕೆಗೆ ನೆರವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ಹೊಣೆಗಾರಿಕಾ ನಿಧಿಯಿಂದ 1.40  ಕೋ.ರೂ.ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ನಿಮಿಷಕ್ಕೆ 500 ಲೀ. ಉತ್ಪಾದನಾ ಸಾಮರ್ಥ್ಯದ ನೂತನ ಆಕ್ಸಿಜನ್ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. […]

ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ, ಬಂಟ್ವಾಳದಲ್ಲಿ ಹಲವು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Monday, December 7th, 2020
Bantwala BJP

ಬಂಟ್ವಾಳ  : ಕಾಂಗ್ರೆಸ್ ನಾಯಕರ ನಡುವಿನ ಹೊಂದಾಣಿಕೆ ಕೊರತೆಯಿಂದ ಅಸಮಾಧಾನಗೊಂಡು ಪಕ್ಷದ ಕೆಲವು ಕಾರ್ಯಕರ್ತರು  ಬಿಜೆಪಿಗೆ  ಸೇರ್ಪಡೆ ಗೊಂಡಿದ್ದಾರೆ. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮವಂತೂರು, ಚಂದ್ರಹಾಸ ಕರ್ಕೆರ ಅರಳ, ಮುಸ್ತಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ […]