ಪಕೋಡ ಮಾರಿ ಜೀವನ ಕಟ್ಟಿಕೊಂಡ ರಾಜೇಶ್ ಬಾಳಿಗ

Thursday, February 8th, 2018
dakshina-kannada

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಪಕೋಡಾ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ಬಗ್ಗೆ ಪರ ವಿರೋಧ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿದೆ. ಇನ್ನೊಂದೆಡೆ ಮೋದಿ ಅವರ ಹೇಳಿಕೆ ವಿರೋಧಿಸಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪಕೋಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕ ದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ರಾಜಕೀಯ ಮುಖಂಡರ ವಾಗ್ವಾದಕ್ಕೆ ವೇದಿಕೆ ಯಾಗುತ್ತಿದೆ. ರಾಜಕೀಯ ಪಕ್ಷಗಳ ಈ ಪಕೋಡಾ ಜಟಾಪಟಿ, ಪಕೋಡಾ ಮಾರಾಟಗಾರರನ್ನು ಕೆರಳಿಸಿದೆ. […]