ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯ : ಶಾಸಕ ವೇದವ್ಯಾಸ್ ಕಾಮತ್

Monday, February 26th, 2024
Vedavyas-kamath

ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ ಸಂದೇಹವುಂಟಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಶಾಲೆಗಳ ಪ್ರವೇಶ ದ್ವಾರದಲ್ಲಿದ್ದ ರಾಷ್ಟ್ರಕವಿ ಕುವೆಂಪು ಅವರ “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂಬ ಸಾಲುಗಳನ್ನು “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು” ಎಂದು ಬದಲಾವಣೆ ಮಾಡಿದ್ದನ್ನು ರಾಜ್ಯದ ಜನರೇ […]