ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆಯವರಿಂದ ಭವ್ಯ ಭಾರತ ನಿರ್ಮಾಣಕ್ಕೆ ಸಂದೇಶ

Monday, August 15th, 2022
Veerendra-Hegde

ಉಜಿರೆ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಕ್ತಪಾತವಿಲ್ಲದೆ, ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯ ಪಡೆಯುವಲ್ಲಿ ಯಶಸ್ವಿಯಾದರು ಎಂದು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರು ಹೇಳಿದರು. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತ ವಿಶ್ವದ ಶ್ರೇಷ್ಠ ರಾಷ್ಟ್ರವಾಗಿದ್ದು ನಾವು ಭಾರತೀಯರು ಎಂದು ಹೇಳಲು ಹೆಮ್ಮೆ ಪಡಬೇಕಾಗಿದೆ ಎಂದು ಹೇಳಿದರು. ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿ […]

ಗಣ್ಯರಿಂದ ಹೆಗ್ಗಡೆಯವರಿಗೆ ಅಭಿನಂದನೆಗಳ ಮಹಾಪೂರ

Monday, July 11th, 2022
Veerendra Hegde

ಉಜಿರೆ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಧರ್ಮಸ್ಥಳಕ್ಕೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಅಭಿನಂದನೆ ಸಲ್ಲಿಸಿದರು. ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ […]

ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Monday, September 13th, 2021
ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು  : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ. ನಮ್ಮ ಹಿರಿಯ ನಾಯಕರಾದ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಉಡುಪಿ ಪಾಲಿಕೆ ಸದಸ್ಯರಾಗಿ ರಾಜಕಾರಣ ಪ್ರಾರಂಭಿಸಿ ಸತತ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಮಂತ್ರಿಯಾಗಿ, ನಂತರ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಸಸ್ಯಹಾರಿಗಳು. ನಿತ್ಯ ಕನಿಷ್ಠ ಒಂದೂವರೆ ಗಂಟೆ ಯೋಗ ಮಾಡುತ್ತಿದ್ದರು. ಆರೋಗ್ಯದ ಮೇಲೆ ಅಷ್ಟು ಕಾಳಜಿ […]

ಆಸ್ಕರ್‌ ಫರ್ನಾಂಡಿಸ್‌ ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರ ತೆಗೆದ ವೈದ್ಯರ ತಂಡ

Tuesday, July 27th, 2021
Oscar Fernandese

ಮಂಗಳೂರು : ತೀವ್ರ ನಿಗಾ ಘಟಕದಲ್ಲಿ  ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸಿಗ ಆಸ್ಕರ್‌ ಫರ್ನಾಂಡಿಸ್‌ ಅವರ ಚಿಕಿತ್ಸೆ ಮುಂದುವರೆದಿದ್ದು ಮಂಗಳವಾರ ಮುಂಜಾನೆ ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಲಾಗಿದೆ. ನಗರದ ಖ್ಯಾತ ನ್ಯೂರೊ ಸರ್ಜನ್‌ ಡಾ.ಸುನಿಲ್‌ ಶೆಟ್ಟಿ ಹಾಗೂ ಅವರ ತಂಡ ಆಸ್ಕರ್‌  ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆಯುವಲ್ಲಿ ಯಶಸ್ವಿಯಾಗಿದೆ. ಸೋಮವಾರ ಮಧ್ಯರಾತ್ರಿ 12.30 ರಿಂದಲೇ ಶಸ್ತ್ರಕ್ರಿಯೆ ಪ್ರಾರಂಭಿಸಿದ್ದು ಮಂಗಳವಾರ ಮುಂಜಾನೆ 4.40 ರ ವರೆಗೂ ನಡೆದಿದೆ. ಕಾಂಗ್ರೆಸ್‌ ಮುಖಂಡರಾದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರತಾಪಚಂದ್ರ ಶೆಟ್ಟಿ, ವಿನಯ ಕುಮಾರ್‌ […]

ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ : ಡಿ.ಕೆ. ಶಿವಕುಮಾರ್

Friday, July 23rd, 2021
Dk Shivakumar

ಮಂಗಳೂರು : ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಆಸ್ಕರ್ […]