ಮಂಗಳೂರು : ಖರ್ಚುವೆಚ್ಚ ವಿವರ ನೀಡದಿದ್ದರೆ ಅಭ್ಯರ್ಥಿಗಳು ಅನರ್ಹ : ರಾಜ್ಯ ಚುನಾವಣಾ ಆಯುಕ್ತರ ಎಚ್ಚರಿಕೆ
Monday, November 4th, 2019ಮಂಗಳೂರು : ಮಂಗಳೂರು ಮಹಾನಗರಪಾಲಿಕೆಗೆ ನಡೆಯುವ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ದೈನಂದಿನ ಖರ್ಚುವೆಚ್ಚದ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಇಲ್ಲದಿದ್ದರೆ ಅಂತಹವರನ್ನು ಅನರ್ಹಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಡಾ. ಬಿ. ಬಸವರಾಜು ಎಚ್ಚರಿಕೆ ನೀಡಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳೂರು ಮಹಾನಗರಪಾಲಿಕೆ ಚುನಾವಣೆಯ ಸಿದ್ದತೆಗಳ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದಾಕ್ಷಣದಿಂದ ತಮ್ಮ ಚುನಾವಣಾ ಖರ್ಚುವೆಚ್ಚಗಳ ನಿಖರವಾದ ದೈನಂದಿನ ಮಾಹಿತಿಗಳನ್ನು ಎರಡು ದಿನಗಳಿಗೊಮ್ಮೆ ಸಲ್ಲಿಸಬೇಕು. ಚುನಾವಣಾಧಿಕಾರಿಗಳು ಈ ಸಂಬಂಧ ಸೂಕ್ಷ್ಮವಾಗಿ ಪರಿಶೀಲಿಸಬೇಕು. ಒಂದು […]