36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ : ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ

Tuesday, January 4th, 2022
Kalburgi-Working-Journalist

ಕಲಬುರಗಿ : ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ಬಸವರಾಜಪ್ಪ ಅಪ್ಪ […]

ದ.ಕ. ಜಿಲ್ಲಾ ಪತ್ರಕರ್ತರ ಸಂಘದ ವಿಶೇಷ ಸಂಚಿಕೆ ಬಿಡುಗಡೆ

Tuesday, January 4th, 2022
Sadhane Book

ಕಲಬುರಗಿ : ಕಲಬುರಗಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಲಿ.)ಹಾಗೂ ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಲಬುರಗಿ ಇದರ ಸಹಯೋಗದಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ವರ್ಷಗಳ ಯಶೋಗಾಥೆಯ ಸಾಧನೆ ಸಂಭ್ರಮ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಕಲಬುರಗಿ ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ಕೇಂದ್ರ ಸಚಿವ ಭಗವಂತ ಖೂಬಾ,ಸಂಸದ ಉಮೇಶ್ ಜಾಧವ್,ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,ಕರ್ನಾಟಕ […]