ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯತೆ ಇದೆ : ವರುಣ್‌ ಗಾಂಧಿ

Saturday, April 27th, 2013
Varun Gandhi

ಬಂಟ್ವಾಳ : ಕರ್ನಾಟಕ ಸ್ವಾಭಿಮಾನಿ, ಸಂಸ್ಕಾರಯುತವಾದ ಪ್ರದೆಶವಾಗಿದ್ದು, ಇಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯತೆ ಇದೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದ ವರುಣ್‌ ಗಾಂಧಿ ನುಡಿದರು. ಅವರು ಸುಕ್ರವಾರ ಬಿ.ಸಿ.ರೋಡಿನಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಅಭ್ಯರ್ಥಿ ಉಳಿಪಾಡಿ ರಾಜೇಶ್‌ ನಾಯ್ಕ ಪರವಾಗಿ ಏರ್ಪಡಿಸಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯಲ್ಲಿ ಮತದಾರ ಹಾಕುವ ಪ್ರತಿಯೊಂದು ಮತ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಲಿದ್ದು, ರಾಜ್ಯದ ಮತದಾರರು ರಾಷ್ಟ್ರದ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತಚಲಾಯಿಸಬೇಕು ಎಂದರು. ಬಂಟ್ವಾಳ […]

ರಾಜ್ಯ ವಿಧಾನ ಸಭಾ ಚುನಾವಣೆ : ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ

Friday, March 22nd, 2013
DC office press meet

ಮಂಗಳೂರು : ಮೇ ೫ ರಂದು ರಾಜ್ಯ ವಿಧಾನ ಸಭಾ ಚುನಾವಣೆಯು ನಡೆಯಲಿದ್ದು ಚುನಾವಣೆಗೆ ಸಂಬಂಧಪಟ್ಟಂತೆ  ದ.ಕ. ಜಿಲ್ಲಾಡಳಿತವು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಹೇಳಿದರು. ಶುಕ್ರವಾರ ಜಿಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು, ದಿನಾಂಕವನ್ನು ಪ್ರಕಟಿಸಿರುವುದರಿಂದ ಮೇ 11 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಬಾರಿ ಚುನಾವಣೆಯಲ್ಲಿ  7,25,162 ಪುರುಷ ಮತದಾರರು, 7,36,497 ಮಹಿಳಾ ಮತದಾರರು ಸೇರಿ ಒಟ್ಟು […]

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ :ಮಾರ್ಚ್ 7ರಂದು ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Wednesday, March 6th, 2013
Local bodies election

ಮಂಗಳೂರು : ಮಾರ್ಚ್ 7ರಂದು ನಡೆಯುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಮತಪ್ರಚಾರದಲ್ಲಿ ತೊಡಗಿದ್ದು, ಅಂತಿಮವಾಗಿ ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದು ಕುತೂಹಲ ಹುಟ್ಟಿಸಿದೆ. ಈ ಚುನಾವಣೆಯು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾದ ಸೆಮಿಫೈನಲ್ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೋ […]