ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

Sunday, June 16th, 2024
Petrol-Rate

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಹೆಚ್ಚಳವಾಗಿದೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆ ಏರಿಕೆ ಮಾಡಿದೆ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ. 14.34 ರಿಂದ ಶೇ. 18.44 […]

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಡಾ.ಎಚ್.ಎಲ್.ನಾಗರಾಜ್

Wednesday, November 10th, 2021
HLNagaraj

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ನಾಗರಾಜ್ ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲ ಎಂದು ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ

Thursday, September 2nd, 2021
Vaccination

ಬೆಂಗಳೂರು : ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

28,000 ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಿಗೆ ರಾಜ್ಯ ಸರ್ಕಾರ ಸಹಿ

Thursday, July 15th, 2021
Jagadish Sheter

ಬೆಂಗಳೂರು: ಇಲೆಕ್ಟ್ರಿಕ್‌ ವಾಹನ, ಡೇಟಾ ಸೇಂಟರ್‌, ಏರೋಸ್ಪೇಸ್‌ ಹಾಗೂ ರಕ್ಷಣಾ ಕಂಪನಿಗಳು ಸೇರಿದಂತೆ 23 ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 28,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಕ್ಕೆ ರಾಜ್ಯ ಸರ್ಕಾರ ಗುರುವಾರ ಸಹಿ ಹಾಕಿದೆ. ಇನ್ವೆಸ್ಟ್‌ ಕರ್ನಾಟಕ ವೇದಿಕೆಯ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಕಾಲಮಿತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “ಕೊವಿಡ್‌ ಸಂಕಷ್ಟದ ನಡುವೆಯೂ ರಾಜ್ಯ […]

ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು-ಸುರೇಶ್ ಕುಮಾರ್

Tuesday, July 13th, 2021
Suresh-Kumar

ಬೆಂಗಳೂರು: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ […]

ಎಚ್ಚರಿಕೆ ನೀಡಿದ್ದಾಗಲೂ ಟಗ್ ಬೋಟ್ ಹಿಂದಿರುಗದ ಕುರಿತಂತೆ ತನಿಖೆಗೆ ಆದೇಶ

Monday, May 17th, 2021
R Ashoka

ಮಂಗಳೂರು : ಟೌಟೆ ಚಂಡಮಾರುತದ ಕುರಿತಂತೆ ಉಂಟಾಗಲಿರುವ ಹವಾಮಾನ ವೈಪರೀತ್ಯದ ಕುರಿತು ಜಿಲ್ಲಾ ಆಡಳಿತವು ನಿರಂತರ ಮುನ್ನೆಚ್ಚರಿಕೆ ನೀಡಿದ್ದಾಗಲೂ ದಡಕ್ಕೆ ಹಿಂದಿರುಗದ ಟಗ್ ಬೋಟ್ ಗಳ ನಿರ್ಧಾರದ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಸೋಮವಾರ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್ ಅಶೋಕ ಅವರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಟಗ್ ಬೋಟ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ […]

ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Thursday, December 24th, 2020
yedyurappa

ಬೆಂಗಳೂರು: ಬ್ರಿಟನ್  ದೇಶದಲ್ಲಿ  ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು  ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ […]

ಕೊಲೆ ಯತ್ನ ಪ್ರಕರಣ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್

Friday, March 6th, 2020
tanveer-shet

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವದರ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ಅವರ ಮೇಲೆ ನಡೆದ ಹಲ್ಲೆ ವಿಚಾರವಾಗಿ ಗೃಹ ಸಚಿವರಿಗೆ ಪತ್ರ ಬರೆದ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. […]

ಪೆಟ್ರೋಲ್,​ ಡೀಸೆಲ್ ಶೇ.3 ರಷ್ಟು ಮತ್ತು ಅಬಕಾರಿ ಶೇ.6 ರಷ್ಟು ತೆರಿಗೆಯನ್ನು ಹೆಚ್ಚಿಸಿದ ರಾಜ್ಯ ಸರ್ಕಾರ

Thursday, March 5th, 2020
cm

ಬೆಂಗಳೂರು : ರಾಜ್ಯದಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಹಣ ಹೊಂದಿರುವ ಸಲುವಾಗಿ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಶೇ. 3 ಹಾಗೂ ಮಧ್ಯಪಾನದ ಮೇಲಿನ ತೆರಿಗೆಯನ್ನು ಶೇ.6 ರಷ್ಟು ಹೆಚ್ಚಿಸಲು ಮುಂದಾಗಿದೆ. ಇಂದು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಬಜೆಟ್ ಮಂಡಿಸಿ ಭಾಷಣ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, “ರಾಜ್ಯದಲ್ಲಿ ಜಿಎಸ್ಟಿ ತೆರಿಗೆ ಹಣ ಸಂಗ್ರಹಣೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.14ರಷ್ಟು ಅಧಿಕವಾಗಿದೆ. ಅಲ್ಲದೆ, ಅಭಿವೃದ್ಧಿಗಾಗಿ ಮತ್ತಷ್ಟು ಹಣ ಸಂಗ್ರಹಿಸುವ […]

ಇಂದಿನಿಂದ ಬಸ್​ ಟಿಕೆಟ್​ ದರ ಶೇ.12ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ

Wednesday, February 26th, 2020
KSRTC-bus-tickets

ಬೆಂಗಳೂರು : ಕೆಎಸ್ಆರ್ಟಿಸಿ ಈಶಾನ್ಯ, ವಾಯುವ್ಯ ಸಾರಿಗೆ ಮತ್ತು ಬಿಎಂಟಿಸಿ ಬಸ್ ಟಿಕೆಟ್ ಪ್ರಯಾಣ ದರವನ್ನು ಶೇ.12ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು ಪರಿಷ್ಕೃತ ದರ ಇಂದಿನಿಂದ ಚಾಲ್ತಿಗೆ ಬರಲಿದೆ. ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಕಳೆದ ಕೆಲ ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ಬಸ್ ಟಿಕೆಟ್ ದರ ಏರಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ, ಪ್ರಯಾಣ ದರ ಏರಿಸಿರುವ ಸರ್ಕಾರ ವಿದ್ಯಾರ್ಥಿಗಳ […]