ಪಿಲಿಕುಳದ ಮೃಗಾಲಯದಲ್ಲಿ ಹಾವು ಸೇರಿ ಆರು ಪ್ರಾಣಿ ಪಕ್ಷಿಗಳ ಸಂತಾನಾಭಿವೃದ್ಧಿ
Sunday, June 6th, 2021ಮಂಗಳೂರು : ಪಿಲಿಕುಳದ ಮೃಗಾಲಯದಲ್ಲಿ ರಾಣಿ ಹುಲಿ, ಕಾಡುಶ್ವಾನ ‘ದೋಳ್’ , ‘ರಿಯಾ’ ಪಕ್ಷಿ, ‘ಲಟಿಕ್ಯುಲೇಟಿಡ್’ ಹೆಬ್ಬಾವು, ಕಾಳಿಂಗ ಸರ್ಪ ಇವು ಸಂತಾನಾಭಿವೃದ್ದಿಯನ್ನು ಮಾಡಿದೆ ಪಿಲಿಕುಳ ಜೈವಿಕ ಉದ್ಯಾವನದ ನಿರ್ದೇಶಕ ಹೆಚ್. ಜಯಪ್ರಕಾಶ್ ಭಂಡಾರಿಯವರು ತಿಳಿಸಿದ್ದಾರೆ. ಪಿಲಿಕುಳ ಮೃಗಾಲದಲ್ಲಿರುವ 10 ವರ್ಷ ಪ್ರಾಯದ ‘ರಾಣಿ’ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಹಿಂದೆ 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಮತ್ತು ವಿಜಯ ಎಂಬ 5 ಮರಿಗಳಿಗೆ ಜನ್ಮ ನೀಡಿದ್ದು, ಅದು ಈಗ ಬೆಳೆದು ದೊಡ್ಡದಾಗಿವೆ. ಈಗ ಜನಿಸಿದ ಮರಿಗಳು ಆರೋಗ್ಯವಾಗಿದ್ದು […]