ಆರ್.ಆರ್. ನಗರ ಟಿಕೆಟ್ ಕೈ ತಪ್ಪಿದ್ದಕ್ಕೆ ರಾಮಚಂದ್ರ ಗರಂ: ಸೊಸೆ ಅಮೂಲ್ಯಗೂ ಬೇಸರ
Tuesday, April 10th, 2018ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿರುವುದಕ್ಕೆ ಟಿಕೆಟ್ ಆಕಾಂಕ್ಷಿ ಹಾಗೂ ಚಿತ್ರನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅಸಮಾಧಾನ ಹೊರಹಾಕಿದ್ದಾರೆ. ಟಿಕೆಟ್ ಕೈತಪ್ಪಲು ಸಂತೋಷ್ ಜಿ ಪ್ರಮುಖ ಕಾರಣವಾಗಿದ್ದು, ಎರಡು ದಿನಗಳಲ್ಲಿ ಟಿಕೆಟ್ ನೀಡದಿದ್ದರೆ ಪಕ್ಷ ತೊರೆದು ಪಕ್ಷೇತರವಾಗಿ ಕಣಕ್ಕಿಳಿಯುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರ್.ಆರ್. ನಗರ ಕ್ಷೇತ್ರಕ್ಕೆ ತುಳಸಿ ಮುನಿರಾಜು ಗೌಡ ಹೆಸರು ಅಂತಿಮಗೊಂಡ ಹಿನ್ನೆಲೆಯಲ್ಲಿ ರಾಮಚಂದ್ರ ಅವರು ಕಾರ್ಯಕರ್ತರ […]