ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಮಂಗಳೂರು ಕಂಬಳ ಉದ್ಘಾಟನೆ

Saturday, December 28th, 2024
Mangaluru-Kambala

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅದ್ಯಕ್ಷತೆಯಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿಸೆಂಬರ್ 28 ರ ಬೆಳಿಗ್ಗೆ 8.30 ಕ್ಕೆ ಚಾಲನೆ ನೀಡಲಾಯಿತು. ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಅವರು ಕಂಬಳಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾ. ಗಣೇಶ್‌ ಕಾರ್ಣಿಕ್ ವಹಿಸದ್ದರು. […]