ಗಾಂಧಿ- 150 ಅಭಿಯಾನಕ್ಕೆ ಮಂಗಳೂರಿನಲ್ಲಿ ಸ್ವಾಗತ
Monday, October 15th, 2018ಮಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಅಭಿಯಾನ- 150 ಜಾಥಾ ಸೋಮವಾರ ಮಂಗಳೂರಿಗೆ ಆಗಮಿಸಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಟ್ಟ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಪ್ರಮೀಳಾ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಾಂಧೀಜಿಯವರ ಸಂದೇಶಗಳು ಸರ್ವಕಾಲಕ್ಕೂ ಸಲ್ಲುವಂತದ್ದಾಗಿದೆ. ಈ ನಿಟ್ಟಿನಲ್ಲಿ ಇದನ್ನು ನಿರಂತರವಾಗಿ ಪಾಲಿಸುತ್ತಾ ಬರಬೇಕು ಎಂದು ಹೇಳಿದರು. ದಕ್ಷಿಣ […]